ಶಿರಸಿ: ಶ್ರೀ ಮಾರಿಕಾಂಬಾ ಗದ್ದುಗೆಗೆ ಶುಕ್ರವಾರ ಸಚಿವ ಮಂಕಾಳ ವೈದ್ಯ ಅವರು ಕುಟುಂಬ ಸಮೇತ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.

ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವ ಮಂಕಾಳ ವೈದ್ಯ, ಶ್ರೀ ಮಾರಿಕಾಂಬಾ ಜಾತ್ರೆ ಇಡೀ ರಾಜ್ಯದಲ್ಲಿಯೇ ಅತ್ಯಂತ ದೊಡ್ಡದಾಗಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಎಂದು ಹೇಳಿದರು

ರಾಜ್ಯದ ವಿವಿಧೆಡೆಯಿಂದ ಬಂದ ಎಲ್ಲ ಭಕ್ತಾದಿಗಳ ಆಸೆ ನನಸಾಗಲಿ ಮತ್ತು ಭಕ್ತಾಧಿಗಳಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ತಾಯಿ ಮಾರಿಕಾಂಬೆ ಕಾಪಾಡಲಿ ಎಂದು

ಪ್ರಾರ್ಥನೆ ಮಾಡಿದರು.

ನಂತರ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಅಂಗವಾಗಿ ಕನ್ನಡಪ್ರಭ ಪತ್ರಿಕೆಯ ನಾಲ್ಕು ಪುಟದ ವಿಶೇಷ ಪುರವಣಿಯನ್ನು ಸಚಿವ ಮಂಕಾಳ ವೈದ್ಯ ಅವರು ಬಿಡುಗಡೆಗೊಳಿಸಿ ಪತ್ರಿಕೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಸಚಿವ ಮಂಕಾಳ ವೈದ್ಯ ಅವರ ಧರ್ಮ ಪತ್ನಿ ,ಪುತ್ರಿ ಮೀನಾ ವೈದ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇದ್ದರು.ಶಿವರಾಮ ಹೆಬ್ಬಾರ್ ದರ್ಶನ

ಶಿರಸಿ:

ನಗರದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಶಾಸಕ ಶಿವರಾಮ ಹೆಬ್ಬಾರ್ ಅವರು ದೇವಿಯ ಗದ್ದುಗೆಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ಸಮೃದ್ಧಿ, ಭಕ್ತರ ಕಲ್ಯಾಣ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಭಕ್ತರು ಹಾಗೂ ದೇವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.ಎಸ್ಪಿ ದೀಪನ್ ಎಂ.ಎನ್. ದರ್ಶನಶಿರಸಿ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಶುಕ್ರವಾರ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಸಲ್ಲಿಸಿ ದೇವಿಯ ದರ್ಶನ ಪಡೆದರು. ನಂತರ ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಆರ್.ಜಿ. ನಾಯ್ಕ, ಉಪಾಧ್ಯಕ್ಷ ಸುದೇಶ ಜೋಗಳೇಕರ, ಧರ್ಮ ದರ್ಶಿಗಳಾದ ಸುಧೀರ ಹಂದ್ರಾಳ, ಶಿವಾನಂದ ಶೆಟ್ಟಿ, ಸಿಪಿಐ ಶೆಶಿಕಾಂತ ವರ್ಮಾ, ಪಿಎಸ್‌ಐ ನಾಗಪ್ಪ ಬಿ. ಮುಂತಾದವರು ಇದ್ದರು.