ಸಾರಾಂಶ
ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು ಸಾರ್ವಜನಿಕರು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು ಸಾರ್ವಜನಿಕರು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು.ನಾಪೋಕ್ಲುವಿನ ಸಂತೆ ಮೈದಾನದ ಸಮೀಪದಲ್ಲಿ ಗುರುವಾರ ನೂತನವಾಗಿ ಆರಂಭಗೊಂಡ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇದು 15 ನೇ ಮಳಿಗೆಯಾಗಿದೆ. ದೇಶದಾದ್ಯಂತ ನಂದಿನಿ ಉತ್ಪನ್ನಗಳು ಹೆಸರುವಾಸಿಯಾಗಿದೆ. ಗುಣಮಟ್ಟದ ವಸ್ತುಗಳು ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಶುಭ ಹಾರೈಸಿದರು.ಈ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ, ಮಳಿಗೆಯ ಮಾಲಿಕ ನೆರವಂಡ ಉಮೇಶ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕೆ.ಎ ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಗ್ರಾಮ ಪಂಚಾಯಿತಿ ಸದಸ್ಯೆ ಕುಲ್ಲೇಟಿರ ಹೇಮಾ ಅರುಣ್, ಇತರ ಸದಸ್ಯರು. ಹಾಲು ಒಕ್ಕೂಟ ಹಾಸನ (ನಂದಿನಿ) ನಿರ್ದೇಶಕ ಹೇಮಂತ್ ಕುಮಾರ್, ಸಹಾಯಕ ನಿರ್ದೇಶಕ ಅನಿಲ್, ವ್ಯವಸ್ಥಾಪಕ ನಂದೀಶ್, ಉಪ ವ್ಯವಸ್ಥಾಪಕ ಡಿ
ಎನ್ ಮಲ್ಲೇಶ್, ಚುನಾಯಿತ ಪ್ರತಿನಿಧಿಗಳು ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))