ಕುವೆಂಪು ಅವರಂತ ಪುಣ್ಯಪುರುಷರು ನಾಡಿಗೆ ಬರಲಿ

| Published : Nov 02 2025, 02:15 AM IST

ಕುವೆಂಪು ಅವರಂತ ಪುಣ್ಯಪುರುಷರು ನಾಡಿಗೆ ಬರಲಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರಕವಿ ಕುವೆಂಪು ಅವರಂತಹ ಧೀಮಂತರು, ಪುಣ್ಯಪುರುಷರು ಕನ್ನಡನಾಡಿನಲ್ಲಿ ಹುಟ್ಟಿ ಬರಲಿ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

ಹೊಳಲ್ಕೆರೆ: ರಾಷ್ಟ್ರಕವಿ ಕುವೆಂಪು ಅವರಂತಹ ಧೀಮಂತರು, ಪುಣ್ಯಪುರುಷರು ಕನ್ನಡನಾಡಿನಲ್ಲಿ ಹುಟ್ಟಿ ಬರಲಿ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.ಪಟ್ಟಣದ ಸಂವಿಧಾನ ಸೌಧದಲ್ಲಿ ಶನಿವಾರ ನಡೆದ 70ನೇ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಎಲ್ಲ ಸಮಾರಂಭಗಳಲ್ಲಿ ಹಾಡುವ ಕುವೆಂಪು ಅವರು ರಚಿಸಿದ ನಾಡಗೀತೆ ಕನ್ನಡಿಗರ ಶಕ್ತಿಯಾಗಿದೆ. ಅದು ನಮ್ಮೆಲ್ಲರ ಅಸ್ಮಿತೆಯಾಗಿದೆ. ಆ ಕವಿತೆಗೆ ಮೈಮನಗಳನ್ನು ರೋಮಾಂಚನಗೊಳಿಸುವ ಅದ್ವಿತೀಯ ಶಕ್ತಿ ಇದೆ ಎಂದರು.ಕನ್ನಡ ತಾಯಿ ಭಾಷೆ. ಮೊದಲು ಕನ್ನಡವನ್ನು ಕಲಿತು ಅದರ ಜೊತೆಗೆ ಬೇರೆ ಭಾಷೆಗಳನ್ನು ಮಕ್ಕಳು ಕಲಿಯಲು ಅಡ್ಡಿ ಇಲ್ಲ. ಕನ್ನಡದ ಸೊಬಗು ನಮಗೆ ಬೇಕೇಬೇಕು. ಬದುಕಿಗಾಗಿ ಇಂಗ್ಲಿಷ್‌ ಮತ್ತಿತರ ಭಾಷೆಗಳನ್ನು ಕಲಿಯಲು ಬೇಕಾದ ವಾತಾವರಣವನ್ನು ಸರ್ಕಾರ ಕಲ್ಪಿಸಿದೆ ಎಂದರು.

ಕಳೆದ ಸಾಲಿನಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದವರಿಗೆ ಐವತ್ತು ಸಾವಿರ ರು.ಗಳ ಬಹುಮಾನ ನೀಡಿದ್ದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರು.ಗಳ ಬಹುಮಾನ ನೀಡುವುದಾಗಿ ಘೋಷಿಸಿದರು.

ಇದೇ ವೇಳೆ ವಿವಿಧ ಸಾಧಕರುಗಳನ್ನು ಸನ್ಮಾನಿಸಲಾಯಿತು.

ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತಿಪ್ಪೇಶಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಮೂರ್ತಿ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಪಿ.ಹನುಮಂತಪ್ಪ, ಹಿರಿಯ ಸಾಹಿತಿ ಚಂದ್ರಶೇಖರ ತಾಳ್ಯ, ತಹಸೀಲ್ದಾರ್ ವಿಜಯಕುಮಾರ, ತಾಪಂ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶ್ರೀನಿವಾಸ್, ವೀರೇಶ್, ಪುರಸಭೆ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.