ಸಾರಾಂಶ
ಶಿಕ್ಷಕರ ಸಂಘದ ವತಿಯಿಂದ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಘವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ನಿವೃತ್ತಿಯಾದ ಶಿಕ್ಷಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಶ್ರಮಿಸಲಾಗುವುದು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಸುದೀರ್ಘ ಸೇವೆಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡಲು ಶ್ರಮಿಸಿದ ಶಿಕ್ಷಕರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರ ಪಾಟೀಲ್ ಆಶಿಸಿದರು.ಪಟ್ಟಣದ ಬಿಆರ್ ಸಿ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನಡೆದ ನಿವೃತ್ತಗೊಂಡ 18 ಮಂದಿ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಸರ್ಕಾರಿ ನೌಕರರಿಗೆ ನಿವೃತ್ತಿ ಸಹಜ. ಆದರೆ, ಶಿಕ್ಷಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಒಬೊಬ್ಬ ಶಿಕ್ಷಕರು ತಮ್ಮದೇ ಆದ ಕ್ರೀಯಾಶೀಲನೆ ಬೋಧನೆಯಿಂದ ವಿದ್ಯಾರ್ಥಿಗಳ ಸಾಧನೆಗೆ ದಾರಿ ದೀಪವಾಗಿದ್ದಾರೆ ಎಂದು ತಿಳಿಸಿದರು.
ನಿವೃತ್ತ ಶಿಕ್ಷಕ ಸ್ವಾಮಿಗೌಡ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶಿಕ್ಷಕರ ಕುಂದುಕೊರತೆಗಳ ನಿವಾರಿಸುವುದರ ಜೊತೆಗೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸುತ್ತಿರುವುದು ಸಂತಸ ತಂದಿದೆ ಎಂದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಚ್.ನಾಗೇಶ್ ಮಾತನಾಡಿ, ಶಿಕ್ಷಕರ ಸಂಘದ ವತಿಯಿಂದ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಘವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ನಿವೃತ್ತಿಯಾದ ಶಿಕ್ಷಕರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಶ್ರಮಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ನಿವೃತ್ತರಾದ 18 ಮಂದಿ ಶಿಕ್ಷಕರನ್ನು ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಆರ್. ದಾಸೇಗೌಡ, ಎಂ.ಎಚ್.ನಾಗೇಶ್, ಕೃಷ್ಣ, ಸುಕನ್ಯ, ಸತ್ಯವತಿ, ಎಂಟಿ ಶಿವಶಂಕರ್, ಚಂದ್ರಶೇಖರ್, ಚಿಕ್ಕಲಿಂಗಯ್ಯ ಸೇರಿ ಇತರರು ಇದ್ದರು.