ಶ್ರೀರಾಮಚಂದ್ರ ಜೀವನಾದರ್ಶ ನಮ್ಮೆಲ್ಲರಿಗೆ ಪ್ರೇರಣೆಯಾಗಲಿ

| Published : Apr 18 2024, 02:18 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಅಥಣಿ : ಪ್ರಜೆಗಳ ಯೋಗಕ್ಷೇಮವೇ ಶ್ರೀರಾಮನ ಮುಖ್ಯ ಧ್ಯೇಯವಾಗಿತ್ತು. ದೇಶದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು. ಯಾರಿಗೂ ಅನ್ಯಾಯ ಆಗಬಾರದು, ಜನಸಾಮಾನ್ಯನ ಅಭಿಪ್ರಾಯಕ್ಕೂ ಮನ್ನಣೆ ಸಿಗಬೇಕು ಮುಂತಾದ ಆದರ್ಶಗಳು ಶ್ರೀರಾಮನ ಆಡಳಿತದ ಭಾಗವಾಗಿತ್ತು. ಹೀಗಾಗಿಯೇ ರಾಮರಾಜ್ಯ ಪರಿಕಲ್ಪನೆ ಎಂಬುದು ಇಡೀ ಜಗತ್ತು ಮೆಚ್ಚುವಂತಹ ಆದರ್ಶ ಆಡಳಿತವಾಗಿದೆ ಎಂದು ಪುರಸಭಾ ಮಾಜಿ ಸದಸ್ಯ ನಟರಾಜ ಹಿರೇಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ಪ್ರಜೆಗಳ ಯೋಗಕ್ಷೇಮವೇ ಶ್ರೀರಾಮನ ಮುಖ್ಯ ಧ್ಯೇಯವಾಗಿತ್ತು. ದೇಶದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು. ಯಾರಿಗೂ ಅನ್ಯಾಯ ಆಗಬಾರದು, ಜನಸಾಮಾನ್ಯನ ಅಭಿಪ್ರಾಯಕ್ಕೂ ಮನ್ನಣೆ ಸಿಗಬೇಕು ಮುಂತಾದ ಆದರ್ಶಗಳು ಶ್ರೀರಾಮನ ಆಡಳಿತದ ಭಾಗವಾಗಿತ್ತು. ಹೀಗಾಗಿಯೇ ರಾಮರಾಜ್ಯ ಪರಿಕಲ್ಪನೆ ಎಂಬುದು ಇಡೀ ಜಗತ್ತು ಮೆಚ್ಚುವಂತಹ ಆದರ್ಶ ಆಡಳಿತವಾಗಿದೆ ಎಂದು ಪುರಸಭಾ ಮಾಜಿ ಸದಸ್ಯ ನಟರಾಜ ಹಿರೇಮಠ ಹೇಳಿದರು. ಅಥಣಿ ಪಟ್ಟಣದ ಶಂಕರನಗರ ವೀರಾಂಜನೇಯ ಮತ್ತು ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಂಡಿದ್ದ ರಾಮನವಮಿ ಕಾರ್ಯಕ್ರಮದ ನಿಮಿತ್ತ ಪ್ರಭು ಶ್ರೀರಾಮಚಂದ್ರನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಹಿಂದುಗಳ ಆರಾಧ್ಯ ದೈವ ರಾಮಚಂದ್ರ ಒಬ್ಬ ಆದರ್ಶ ಪುರುಷ, ಅವರ ಜೀವನದ ಆದರ್ಶಗಳು ನಮ್ಮೆಲ್ಲರಿಗೆ ಪ್ರೇರಣೆಯಾಗಬೇಕು. ಅವರ ಜನ್ಮದಿನವನ್ನು ಆಚರಿಸುವ ಮೂಲಕ ನಮ್ಮೆಲ್ಲರ ಜೀವನದಲ್ಲಿ ಅವರ ಆದರ್ಶ ಅನುಸರಿಸಲು ಪ್ರಯತ್ನಿಸೋಣ ಎಂದು ಹೇಳಿದರು. ನಿವೃತ್ತ ಶಿಕ್ಷಕ ಎಸ್.ಎಸ್. ಹೂಟಿ, ವಿಠ್ಠಲ ಪರ್ವತಿ, ರವಿ ಕೋಟಿ, ಆರ್.ಬಿ. ಚೌಗುಲಾ, ತಾಯಪ್ಪ ಕೋತ, ಮಲ್ಲಪ್ಪ ಗಟ್ಟನಟ್ಟಿ, ಸಚಿನ್ ಅವಟಿ, ಬಿ.ಎಂ. ಮಗದುಮ್ಮ, ಮಂಜುನಾಥ ಹುಲಕುಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.