ಸಾರಾಂಶ
ಕನಕಪುರ: ನಗರದ ಶಕ್ತಿದೇವತೆ ಶ್ರೀ ಕೆಂಕೇರಮ್ಮ ದೇವಾಲಯದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಗರದ ರೋಟರಿ ಭವನದಲ್ಲಿ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳಿಂದ 191 ಬಾಟಲ್ ರಕ್ತ ಸಂಗ್ರಹಿಸಲಾಯಿತು.
-ಅಭಿಮಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ, ಉಚಿತ ಆರೋಗ್ಯ ಶಿಬಿರ
ಕನಕಪುರ: ನಗರದ ಶಕ್ತಿದೇವತೆ ಶ್ರೀ ಕೆಂಕೇರಮ್ಮ ದೇವಾಲಯದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಗರದ ರೋಟರಿ ಭವನದಲ್ಲಿ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳಿಂದ 191 ಬಾಟಲ್ ರಕ್ತ ಸಂಗ್ರಹಿಸಲಾಯಿತು.ಕಾಂಗ್ರೆಸ್ ಮುಖಂಡ ಹಾಗೂ ಆರ್‌ಇಎಸ್ ಸಂಸ್ಥೆ ಅಧ್ಯಕ್ಷ ಶ್ರೀಕಂಠು ಮಾತನಾಡಿ, ಕಾಂಗ್ರೆಸ್ ಪಕ್ಷದ ಯುವ ಮುಖಂಡ ಹಾಗೂ ದೇಶದಲ್ಲಿ ನಂ.1 ಕ್ಷೇತ್ರವಾಗಿ ಮಾಡಲು ಹಗಲಿರುಳು ಶ್ರಮಿಸಿದ್ದ ಡಿ.ಕೆ.ಸುರೇಶ್ ಅವರಿಗೆ ಮುಂದಿನ ದಿನಗಳಲ್ಲಿ
ಕ್ಷೇತ್ರದ ಜನಸೇವೆ ಮಾಡುವ ಅವಕಾಶ ಹಾಗೂ ಆರೋಗ್ಯ, ಆಯಸ್ಸು, ಶಕ್ತಿಯನ್ನು ದೇವರು ನೀಡಲಿ ಎಂದು ಹಾರೈಸಿದರು.ಈ ವೇಳೆ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಯುವ ಕಾಂಗ್ರೆಸ್ ಮುಖಂಡರಾದ ರವೀಂದ್ರ ಗೌಡ (ಪಪ್ಪಿ) ಅನಿಲ್ ಕುಮಾರ್, ನಗರಸಭಾ ಮಾಜಿ ಅಧ್ಯಕ್ಷ ಕೋಟೆ ಕಿರಣ್, ಹರೀಶ್, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ನಾಗರಾಜು, ಯುವ ಕಾಂಗ್ರೆಸ್ ಮುಖಂಡರಾದ ದೀಪು, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಧು, ಆಶ್ರಯ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ್ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಕೆ ಕೆ ಪಿ ಸುದ್ದಿ 04:ಮಾಜಿ ಸಂಸದ ಡಿ.ಕೆ.ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಕನಕಪುರದ ರೋಟರಿ ಭವನದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಯಂ ಪ್ರೇರಿತ ರಕ್ತದಾನ ಹಾಗೂ ಉಚಿತ ಆರೋಗ್ಯ ಶಿಬಿರ ಆಯೋಜಿಸಿದ್ದರು.