ಪ್ರತಿಭಾವಂತ ಮಕ್ಕಳಿಗೆ ಉಜ್ವಲ ಭವಿಷ್ಯ ಸಿಗಲಿ: ಶಾಸಕ ಗಣೇಶ್‌

| Published : Jun 27 2024, 01:07 AM IST

ಸಾರಾಂಶ

ಶಿವ ತಾಂಡವ ಡ್ಯಾನ್ಸ್ ಇನ್ಸ್ಟಿಟ್ಯೂಟ್ ನ ೨೦ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಪರ್ಶ ಆಸ್ಪತ್ರೆ ಹಾಗೂ ಲಯನ್ ಸಂಸ್ಥೆ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ, ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ ಹಾಗೂ ಬೇಸಿಗೆ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಪ್ರತಿಭಾವಂತ ಮಕ್ಕಳಿಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಅಭಿಪ್ರಾಯಪಟ್ಟರು. ಪಟ್ಟಣದ ಗುರುಭವನದಲ್ಲಿ ಶಿವ ತಾಂಡವ ಡ್ಯಾನ್ಸ್ ಇನ್ಸ್ಟಿಟ್ಯೂಟ್ ನ ೨೦ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಪರ್ಶ ಆಸ್ಪತ್ರೆ ಹಾಗೂ ಲಯನ್ ಸಂಸ್ಥೆ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ, ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ ಹಾಗೂ ಬೇಸಿಗೆ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಡಿ ತಾಲೂಕಿನ ಮಕ್ಕಳಿಗೆ ಅವಕಾಶಗಳು ಕಡಿಮೆ, ಆದರೆ ಚಲನಚಿತ್ರ ನೃತ್ಯ ನಿರ್ದೇಶಕ, ಸಂಸ್ಥೆಯ ವ್ಯವಸ್ಥಾಪಕ ಅವಿನಾಶ್ರ ಪರಿಶ್ರಮದಿಂದ ಶಿವ ತಾಂಡವ ಡ್ಯಾನ್ಸ್ ಇನ್ಸ್ಟಿಟ್ಯೂಟ್ ೨೦ ನೇ ವಾರ್ಷಿಕೋತ್ಸವ ಆಚರಿಸಿಕೊಂಡಿದೆ ಇದು ಶ್ಲಾಘನೀಯ ಎಂದರು.

ಚಾಮರಾಜನಗರ ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಡಾ.ರಾಜ್ ಕುಮಾರ್, ಪುನೀತ್ ರಾಜ್‍ಕುಮಾರ್‌ರಂತ ಪ್ರತಿಭಾವಂತ ನಟರು ನಮ್ಮ ಜಿಲ್ಲೆಯವರು ಎಂಬುದಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಬಹಳ ಮುಖ್ಯವಾಗಿದೆ.ನೃತ್ಯ ಮತ್ತು ಸಂಗೀತದಿಂದ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಕಾಪಾಡಿಕೊಂಡು ಬರಲು ಸಹಕಾರಿ ಎಂದರು.

ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಹಳ್ಳಿ ಮಾತನಾಡಿ ಭಾರತ ದೇಶದಲ್ಲಿ ಭಾರತ ನಾಟ್ಯ,ಕಥಕ್ಕಳಿ,ಕಥಕ್,ಯಕ್ಷಗಾನ,ಅಸ್ಸಾಂ ನ ಚೌ,ಮೋಹನ ಅಟ್ಟಾಮ್ ಪ್ರಕಾರಗಳಿವೆ ಎಂದರು. ವಕೀಲ ಸಿದ್ದೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.ವಿವಿಧ ಕ್ಷೇತ್ರದ ಸಾಧಕರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌,ವಿಧಾನ ಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ ಸನ್ಮಾನಿಸಿದರು.

ಈ ವೇಳೆ ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್‌, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ನಟೇಶ್‌, ಪುರಸಭೆ ಮಾಜಿ ಸದಸ್ಯ ಹಸಗೂಲಿ ಸಿದ್ದಯ್ಯ ಹಾಗೂ ಸುರೇಶ್ ಗೋಲ್ಡ್,ಶಿವಣ್ಣ,ಲಯನ್ ಪ್ರಮೀಳಾ, ಪೂರ್ಣಚಂದ್ರ ತೇಜಸ್ವಿ, ಸಿದ್ದಾರ್ಥ ನಾಯಕ್ ಸಂಸ್ಥೆಯ ವ್ಯವಸ್ಥಾಪಕ ಅವಿನಾಶ್ ಇದ್ದರು.