ಸಾರಾಂಶ
ಕಂಪ್ಲಿ: ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು. ತಹಸೀಲ್ದಾರ್ ಶಿವರಾಜ್ ಶಿವಪುರ ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶ ಹಿಂದುಳಿದ ಹಿನ್ನೆಲೆ 371ಜೆ ಮೂಲಕ ಹಲವು ಯೋಜನೆಗಳ ಅಭಿವೃದ್ಧಿಗೆ ಅಣಿಯಾಗುತ್ತಿದೆ. ಕಲ್ಯಾಣ(ಹೈ.ಕ)ಕರ್ನಾಟಕ ವಿಮೋಚನೆಗೆ ಶ್ರಮಿಸಿದವರ ಬಗ್ಗೆ ನಾವು ಗೌರವ ಹೊಂದಿರಬೇಕು. ಅವರಂತೆಯೇ ನಾವು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಅವರ ಆದರ್ಶಗಳು ನಮಗೆ ಮಾದರಿಯಾಗಬೇಕು ಎಂದು ಹೇಳಿದರು.
ಇದೇವೇಳೆ ಷಾಮಿಯಾಚಾಂದ್ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಡಾ. ಸುನಿಲ್ ಬಿ. ವಿಶೇಷ ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ರೇಣುಕಪ್ಪ, ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ, ಪಿಎಸ್‌ಐ ನಿಂಗಪ್ಪ, ಉಪ ತಹಸೀಲ್ದಾರ್ ರವೀಂದ್ರ ಕುಮಾರ್, ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಅರವಿ ಬಸವನಗೌಡ, ಪಿ.ಬ್ರಹ್ಮಯ್ಯ, ಬಿ.ವಿರೂಪಾಕ್ಷಿ ಯಾದವ್, ಇಸಿಒ ಟಿ.ಎಂ. ಬಸವರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ವಿರೂಪಾಕ್ಷಿ, ಲಕ್ಷ್ಮಣ್ ನಾಯಕ್, ರಾಧಾ ಸೇರಿದಂತೆ ಅನೇಕರಿದ್ದರು.
ಹೂವಿನಹಡಗಲಿ: ವಿಮೋಚನಾ ದಿನಾಚರಣೆಹೂವಿನಹಡಗಲಿ: ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ತಹಸೀಲ್ದಾರ್ ಜಿ. ಸಂತೋಷಕುಮಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದಿನ ಕಲ್ಯಾಣ ಕರ್ನಾಟಕ ಪ್ರದೇಶ 1947ರ ನಂತರದಲ್ಲಿಯೂ ಹೈದರಾಬಾಬಾದಿನ ನಿಜಾಮರ ಹಿಡಿತದಲ್ಲಿತ್ತು. ಅಂದು ಕೇಂದ್ರದ ಸಚಿವರಾಗಿದ್ದ ಸರ್ದಾರ್ ವಲ್ಲಭ ಭಾಯಿ ಪಟೇಲರು, ನಿಜಾಮರ ಆಡಳಿತದಿಂದ ಮುಕ್ತಿಗೊಳಿಸಲು ಸಾಕಷ್ಟು ಶ್ರಮಿಸಿದ್ದಾರೆ. ನಂತರದಲ್ಲಿ ಹರಿದು ಹಂಚಿ ಹೋಗಿದ್ದ ದೇಶದ ವಿವಿಧ ಪ್ರಾಂತಗಳನ್ನು ಪಟೇಲರು ಒಂದುಗೂಡಿಸಿದ್ದರು. ಸೆ. 17ರಂದು ನಿಜಾಮರಿಂದ ಮುಕ್ತಿ ಪಡೆದ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಶಾಸಕ ಕೃಷ್ಣನಾಯ್ಕ, ತಾಪಂ ಇಒ ಉಮೇಶ, ಸಿಪಿಐ ಪ್ರದೀಪ್ ಭೂಸರಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.