ಕನ್ನಡಿಗರಲ್ಲಿ ಪುಸ್ತಕ ಓದುವ ಹವ್ಯಾಸ ವೃದ್ಧಿಯಾಗಲಿ

| Published : Nov 03 2025, 01:15 AM IST

ಸಾರಾಂಶ

ದೊಡ್ಡಬಳ್ಳಾಪುರದ ವಿವಿಧ ಸಂಘಟನೆಗಳ‌ ವತಿಯಿಂದ ನಡೆಯುತ್ತಾ ಬರುತ್ತಿರುವ ಈ ಸ್ಪರ್ಧೆಯಲ್ಲಿ ಈ ವರ್ಷ ಕುವೆಂಪು ಅವರ ಪುಸ್ತಕ ಓದಿದ ನಂತರ ಪರೀಕ್ಷೆ ಬರೆದು ಬಹುಮಾನಗಳನ್ನು ಗೆಲ್ಲಬಹುದಾಗಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಕನ್ನಡಿಗರಲ್ಲಿ ಕನ್ನಡ ಪುಸ್ತಕ ಪ್ರೀತಿಯನ್ನು ಬೆಳೆಸಲು ಕನ್ನಡ ಪುಸ್ತಕ ಓದಿ - ಬಹುಮಾನ ಗೆಲ್ಲಿ ಎಂಬ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ತಿಳಿಸಿದರು.

ಅವರು ಇಲ್ಲಿನ ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕನ್ನಡ ಪುಸ್ತಕ ಓದಿ - ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು‌ ಎಂಬ ಮೂರು ವರ್ಗದವರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ದೊಡ್ಡಬಳ್ಳಾಪುರದ ವಿವಿಧ ಸಂಘಟನೆಗಳ‌ ವತಿಯಿಂದ ನಡೆಯುತ್ತಾ ಬರುತ್ತಿರುವ ಈ ಸ್ಪರ್ಧೆಯಲ್ಲಿ ಈ ವರ್ಷ ಕುವೆಂಪು ಅವರ ಪುಸ್ತಕ ಓದಿದ ನಂತರ ಪರೀಕ್ಷೆ ಬರೆದು ಬಹುಮಾನಗಳನ್ನು ಗೆಲ್ಲಬಹುದಾಗಿದೆ. ನವೆಂಬರ್ 23 ರಂದು ದೊಡ್ಡಬಳ್ಳಾಪುರ ನಗರದ ಎಂಎಬಿಎಲ್ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಯುತ್ತದೆ ಎಂದರು.

ತಾ. ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ನಡೆಯುವ ಈ ಕಾರ್ಯಕ್ರಮ ನ. 3ರಂದು ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಳ್ಳಲಿದೆ.‌ ಸಾಹಿತಿ ಡಾ.ಎ.ಓ.ಆವಲಮೂರ್ತಿ, ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್, ಡಾ.ಇಂದಿರಾ ಪಾಲ್ಗೊಳ್ಳುವರು ಎಂದರು.

ಕನ್ನಡ ಜಾಗೃತ ಪರಿಷತ್ತು ಅಧ್ಯಕ್ಷ ಕೆ.ವೆಂಕಟೇಶ್, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕಾರ್ಯಕಾರಿ ಸಮಿತಿಯ ಪರಮೇಶ್, ಜಿ.ಸಿ.ಶಿವಕುಮಾರ್, ಚಂದ್ರಣ್ಣ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಎ.ಅಣ್ಣಯ್ಯ, ಇಸ್ತೂರು ರಂಗಸ್ವಾಮಯ್ಯ ಮುಂತಾದವರು ಭಾಗವಹಿಸಿದ್ದರು.

‘ಕನ್ನಡ ಪುಸ್ತಕ ಓದಿ - ಬಹುಮಾನ ಗೆಲ್ಲಿ’ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಪಿಸುವವರು ಕುವೆಂಪು ಪುಸ್ತಕ ಮತ್ತು ಹೆಚ್ಚಿನ ವಿವರಗಳನ್ನು ಪಡೆಯಲು ಡಾ.ಎ.ಓ.ಆವಲಮೂರ್ತಿ 7411882304, ಡಿ.ಪಿ.ಆಂಜನೇಯ 9242993593, ವೆಂಕಟರಾಜು - 9886223228, ಕೆ.ಮಹಾಲಿಂಗಯ್ಯ 9916690001, ವಿ.ಎಸ್.ಹೆಗಡೆ 8095456549, ಪಿ.ಗೋವಿಂದರಾಜು 9448103602, ಜಿ.ಸುರೇಶ್ 9206099880 ಇವರನ್ನು ಸಂಪರ್ಕಿಸಬಹುದು.ಫೋಟೋ-2ಕೆಡಿಬಿಪಿ1- ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಭಾನುವಾರ ದೊಡ್ಡಬಳ್ಳಾಪುರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಜಾಲನೆ ನೀಡಲಾಯಿತು.