ಉದರನಿಮಿತ್ತಂ ಬಹುಕೃತ ವೇಷಂ ಎಂಬಂತೆ ಪ್ರತಿಯೊಬ್ಬರೂ ಜೀವನೋಪಾಯಕ್ಕಾಗಿ ವಿಭಿನ್ನ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಯಾವುದೇ ವೃತ್ತಿಯಲ್ಲಿದ್ದರೂ ಪ್ರಾಮಾಣಿಕತೆ ಮತ್ತು ನೈತಿಕತೆಯನ್ನು ಬಿಟ್ಟುಕೊಡಬಾರದು. ನಮಗೆ ದೊರೆತ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.
ಹಾಸನ: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಎದುರಿಸುತ್ತಿರುವ ಸಂಕಷ್ಟ ದೂರವಾಗಿ, ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಸಮೃದ್ಧಿಗೊಳ್ಳಲಿ ಹಾಗೂ ನಾಡಿನ ಜನಜೀವನದಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ನೆಲೆಸಲಿ ಎಂದು ಚಿಕ್ಕಮಗಳೂರಿನ ವಿನಯ್ ಗುರೂಜಿ ಹಾಸನಾಂಬೆ ದೇವಿಯಲ್ಲಿ ಪ್ರಾರ್ಥಿಸಿದರು.
ಮಂಗಳವಾರ ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚಾಗಿದ್ದು, ಅದರಲ್ಲಿನ ಮಾಹಿತಿಯ ಸತ್ಯಾಸತ್ಯತೆ ಅರಿಯುವ ವಿವೇಚನೆ ಪ್ರತಿಯೊಬ್ಬರಲ್ಲೂ ಇರಬೇಕು. ಯಾವುದೇ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವುದಕ್ಕಿಂತ ಆ ಕ್ಷೇತ್ರಕ್ಕೆ ತಕ್ಕ ಅರ್ಹತೆ, ಅನುಭವ ಮತ್ತು ನೈತಿಕ ಮೌಲ್ಯಗಳನ್ನು ಹೊಂದಿರುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು.ಉದರನಿಮಿತ್ತಂ ಬಹುಕೃತ ವೇಷಂ ಎಂಬಂತೆ ಪ್ರತಿಯೊಬ್ಬರೂ ಜೀವನೋಪಾಯಕ್ಕಾಗಿ ವಿಭಿನ್ನ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಯಾವುದೇ ವೃತ್ತಿಯಲ್ಲಿದ್ದರೂ ಪ್ರಾಮಾಣಿಕತೆ ಮತ್ತು ನೈತಿಕತೆಯನ್ನು ಬಿಟ್ಟುಕೊಡಬಾರದು. ನಮಗೆ ದೊರೆತ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.
ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ವಿಶೇಷವಾಗಿ ಯುವಜನತೆ ಜಾಗರೂಕತೆ ವಹಿಸಬೇಕು. ವ್ಯಕ್ತಿಗಳ ಗೌರವ, ಅರ್ಹತೆ ಹಾಗೂ ಅವರ ಸಾಧನೆಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಪ್ರತಿಕ್ರಿಯಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.