ಸೂಲಿಬೆಲೆ: ಅಹಿಂಸೆ ಮತ್ತು ಶಾಂತಿ ಅಸ್ತ್ರದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮ ಗಾಂಧಿಯವರ ಮರಣದಿನವನ್ನು ಭಾರತಾದ್ಯಂತ ಹುತಾತ್ಮರ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ ಎಂದು ವಿವೇಕಾನಂದ ಪ್ರೌಢಶಾಲೆ ಮುಖ್ಯಶಿಕ್ಷಕ ಡಿ.ಲಕ್ಷ್ಮೀನಾರಾಯಣ್ ಹೇಳಿದರು
ಸೂಲಿಬೆಲೆ: ಅಹಿಂಸೆ ಮತ್ತು ಶಾಂತಿ ಅಸ್ತ್ರದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮ ಗಾಂಧಿಯವರ ಮರಣದಿನವನ್ನು ಭಾರತಾದ್ಯಂತ ಹುತಾತ್ಮರ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ ಎಂದು ವಿವೇಕಾನಂದ ಪ್ರೌಢಶಾಲೆ ಮುಖ್ಯಶಿಕ್ಷಕ ಡಿ.ಲಕ್ಷ್ಮೀನಾರಾಯಣ್ ಹೇಳಿದರು.
ಮೇರಾ ಯುವ ಭಾರತ್, ಜೇನುಗೂಡು ರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ವಿವೇಕಾನಂದ ಪ್ರೌಢಶಾಲೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಹಾಗೂ ಗಾಂಧಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು..ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಮಾತನಾಡಿ, ೧೯೪೮ ಜನವರಿ ೩೦ರಂದು ಮಹಾತ್ಮಗಾಂಧೀಜಿ ಪ್ರಾರ್ಥನೆಗೆಂದು ತೆರಳುವ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದು ಸ್ಥಳದಲ್ಲಿಯೇ ಮೃತಪಟ್ಟರು. ಆ ದಿನವೇ ಹುತಾತ್ಮರ ದಿನಾಚರಣೆ ಮಾಡಲು ಸರ್ಕಾರವು ಅದೇಶಿಸಿದೆ ಎಂದರು.
ಸಂಪನ್ಮೂಲ ವ್ಯಕ್ತಿ ನಟರಾಜ್, ರಾಜ್ಯ ವೈಜ್ಞಾನಿಕ ವಿಜ್ಞಾನ ಪರಿಷತ್ ಜಿಲ್ಲಾಧ್ಯಕ್ಷ ಎಂ.ಆರ್.ಉಮೇಶ್ ಮಾತನಾಡಿ ಗಾಂಧೀಜಿಯವರ ಕನಸು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಜಾಗೃತರಾಗಬೇಕು ಎಂದರು.ಜೇನುಗೂಡು ಟ್ರಸ್ಟ್ ನಿರ್ದೇಶಕ ಅತ್ತಿಬೆಲೆ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಧರ್ಮಸ್ಥಳ ಯೋಜನೆಯ ಮೇಲ್ವಿಚಾರಕ ಚಂದನ್, ಪ್ರಶಾಂತ್, ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಶಿಕ್ಷಕ ವರ್ಗ ಹಾಜರಿದ್ದರು.