ಶಾಂತಿ, ಸೌಹಾರ್ದ ಹಾಗೂ ಸಹೋದರತ್ವದ ಪ್ರತೀಕವಾದ ಈದ್ ಮಿಲಾದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ ಮುಸ್ಲಿಂ ಬಾಂಧವರು ಸಡಗರ, ಸಂಭ್ರಮದಿಂದ ಆಚರಿಸಿದ್ದಾರೆ.
- ಬೆಂಗಳೂರಿನಿಂದ ದಾವಣಗೆರೆಗೆ ಆಗಮಿಸುತ್ತಿದ್ದ ಸಚಿವ । ಆನಗೋಡಲ್ಲಿ ಮುಸ್ಲಿಂ ಬಾಂಧವರ ಭೇಟಿ, ಶುಭಾಶಯ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ಶಾಂತಿ, ಸೌಹಾರ್ದ ಹಾಗೂ ಸಹೋದರತ್ವದ ಪ್ರತೀಕವಾದ ಈದ್ ಮಿಲಾದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ ಮುಸ್ಲಿಂ ಬಾಂಧವರು ಸಡಗರ, ಸಂಭ್ರಮದಿಂದ ಆಚರಿಸಿದರು.ಈ ಹಿನ್ನೆಲೆ ಬೆಂಗಳೂರಿನಿಂದ ದಾವಣಗೆರೆಗೆ ಆಗಮಿಸುತ್ತಿದ್ದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಮಾರ್ಗಮಧ್ಯೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಆನಗೋಡು ಗ್ರಾಮದಲ್ಲಿ ಮುಸ್ಲಿಂ ಬಾಂಧವರನ್ನು ಭೇಟಿಯಾಗಿ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪ್ರವಾದಿ ಮಹಮ್ಮದರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮಿಲಾದ್ ಹಬ್ಬವು ಶಾಂತಿ, ಸಹೋದರತ್ವ, ಸಹಾನುಭೂತಿ ಹಾಗೂ ಮಾನವೀಯತೆಯ ಸಂದೇಶ ಸಾರುತ್ತದೆ. ಪ್ರವಾದಿ ಮಹಮ್ಮದರ ಆದರ್ಶಗಳು ಸಮಾಜದಲ್ಲಿ ಪರಸ್ಪರ ಪ್ರೀತಿ, ಗೌರವ ಮತ್ತು ಸೌಹಾರ್ದ ಬೆಳೆಸಲು ಪ್ರೇರಣೆಯಾಗಲಿ. ಈದ್ ಮಿಲಾದ್ ಸಂದರ್ಭದಲ್ಲಿ ದೇಶದ ಎಲ್ಲ ನಾಗರಿಕರಿಗೆ ಹಾಗೂ ದೇಶ- ವಿದೇಶಗಳಲ್ಲಿ ನೆಲೆಸಿರುವ ಮುಸ್ಲಿಂ ಬಾಂಧವರಿಗೆ ಹೃತ್ಫೂರ್ವಕ ಶುಭಾಶಯಗಳು ಎಂದು ಶುಭ ಹಾರೈಸಿದರು.ಸಚಿವರ ಆಗಮನದ ಸಂದರ್ಭದಲ್ಲಿ ಸ್ಥಳೀಯ ಮುಸ್ಲಿಂ ಮುಖಂಡರು ಹಾಗೂ ಬಾಂಧವರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಈದ್ ಮಿಲಾದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಈ ಸಂದರ್ಭ ಮಸೀದಿ ಗುರುಗಳಾದ ಹುಸೇನ್ ಸಾಬ್, ಕೆ.ಸನಾವುಲ್ಲಾ ಸಾಬ್, ಸಿರಾಜ್ ಅಹಮದ್, ಎ.ಎನ್.ಸಾದಿಕ್, ಚಮನ್ ಸಾಬ್, ಮಲ್ಲಿಕ್ ಸಾಬ್, ಗ್ರಾಪಂ ಮಾಜಿ ಅಧ್ಯಕ್ಷ ನಸರುಲ್ಲಾ, ಡಿ.ಎಂ. ಬಸವರಾಜ್, ಡಿ.ಎನ್. ಕರಿಬಸಪ್ಪ, ಕೆ.ರವಿ, ಎಚ್.ಎಸ್.ಪ್ರಕಾಶ್ ಇನ್ನಿತರರು ಇದ್ದರು.- - -
-26ಕೆಡಿವಿಜಿ31, 32:ಈದ್ ಮಿಲಾದ್ ಹಿನ್ನೆಲೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಆನಗೋಡು ಗ್ರಾಮದಲ್ಲಿ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.