ನರೇಗಾ ಯೋಜನೆ ಸದುಪಯೋಗವಾಗಲಿ

| Published : Feb 08 2025, 12:30 AM IST

ಸಾರಾಂಶ

ನರೇಗಾ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಆರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ಧತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ, ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಬೇಕು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ನರೇಗಾ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು.

ತಾಲೂಕಿನ ಯಲಹಂಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ರಸ್ತೆ ನಿರ್ಮಾಣದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಭರಾಟೆಯಲ್ಲಿ ಕೈಗಾರಿಕೆಗಳು ನೆಲಕಚ್ಚುತ್ತಿವೆ. ಆದರೆ ನಮ್ಮ ದೇಶದ ಕೂಲಿಗಾಗಿ ಕಾಳಿನಂತಹ ಮಹತ್ತರ ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಆರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ಧತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ, ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಬೇಕು ಎಂದರು.

ಯಲಹಂಕ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಅಶೋಕ್ ಮಾತನಾಡಿ, ಶಾಸಕರು ತಾಲೂಕಿನಾದ್ಯಂತ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಚಿಕ್ಕನಹಳ್ಳಿ ಗ್ರಾಮಕ್ಕೆ ಶಾಸಕರ ಅನುದಾನದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಿಕೊಟ್ಟರೆ, ಇಲ್ಲಿನ ಬಡಜನರಿಗೆ ಸಣ್ಣ ಪುಟ್ಟ ಕಾರ್ಯಕ್ರಮ ಮಾಡಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಚಿಕ್ಕನಹಳ್ಳಿ ಗ್ರಾಮದ ಸೋಮಯ್ಯ, ಕೃಷ್ಣಪ್ಪ, ದಿನೇಶ್, ಪುನೀತ್, ತಿಮ್ಮಪ್ಪ, ಯಲ್ಲಯ್ಯ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.