ಪಾಡ್ದನಗಳು ಗ್ರಂಥಸ್ಥವಾಗಿ ಮುಂದಿನ ಪಳಿಗೆಗೆ ಸಿಗುವಂತಾಗಲಿ: ಡಾ.ಪ್ರತಿಭಾ ಆರ್.

| Published : Apr 24 2025, 11:47 PM IST

ಪಾಡ್ದನಗಳು ಗ್ರಂಥಸ್ಥವಾಗಿ ಮುಂದಿನ ಪಳಿಗೆಗೆ ಸಿಗುವಂತಾಗಲಿ: ಡಾ.ಪ್ರತಿಭಾ ಆರ್.
Share this Article
  • FB
  • TW
  • Linkdin
  • Email

ಸಾರಾಂಶ

ಮೂಡುಬೆಳ್ಳೆಯ ಪಾಣಾರ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಬೆಳ್ಳೆ ಕಾಡಬೆಟ್ಟು ಶ್ರೀ ಪಂಜುರ್ಲಿ ದೈವಸ್ಥಾನದ ಪ್ರಾಂಗಣದಲ್ಲಿ ಮೂಡುಬೆಳ್ಳೆಯ ಹಿರಿಯ ಪಾಡ್ದನ ಹಾಡುಗಾರ್ತಿ ಅಪ್ಪಿ ಕೃಷ್ಣ ಪಾಣಾರ ಅವರಿಗೆ ಕರ್ನಾಟಕ ಸರ್ಕಾರದ ಕರ್ನಾಟಕ ಜಾನಪದ ಅಕಾಡೆಮಿಯಿಂದ ವಾರ್ಷಿಕ ‘ಗೌರವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ಕಾಪು

ಬಾಯಿಯಿಂದ ಬಾಯಿಗೆ ಹರಿದು ಬಂದ ಪಾಡ್ದನಗಳು ನಮ್ಮ ಭವ್ಯ ಜಾನಪದ ಇತಿಹಾಸ ತಿಳಿಸುತ್ತವೆ. ಪಾಡ್ದಾನಗಳ ಮೂಲಕ ಪಾಣಾರ ಸಮುದಾಯ ಈ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಇದನ್ನು ಶಾಶ್ವತವಾಗಿ ಉಳಿಸುವ ಕಾರ್ಯ ನಡಯಬೇಕು. ಪಾಡ್ದನಗಳು ಗ್ರಂಥಸ್ಥವಾಗಿ ಮುಂದಿನ ಪೀಳಿಗೆಗೆ ಸಿಗುವಂತಾಗಬೇಕು ಎಂದು ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಆರ್ ಆಶಿಸಿದ್ದಾರೆ.

ಇಲ್ಲಿನ ಮೂಡುಬೆಳ್ಳೆಯ ಪಾಣಾರ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಬೆಳ್ಳೆ ಕಾಡಬೆಟ್ಟು ಶ್ರೀ ಪಂಜುರ್ಲಿ ದೈವಸ್ಥಾನದ ಪ್ರಾಂಗಣದಲ್ಲಿ ಮೂಡುಬೆಳ್ಳೆಯ ಹಿರಿಯ ಪಾಡ್ದನ ಹಾಡುಗಾರ್ತಿ ಅಪ್ಪಿ ಕೃಷ್ಣ ಪಾಣಾರ ಅವರಿಗೆ ಕರ್ನಾಟಕ ಸರ್ಕಾರದ ಕರ್ನಾಟಕ ಜಾನಪದ ಅಕಾಡೆಮಿಯಿಂದ ವಾರ್ಷಿಕ ‘ಗೌರವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಜಾನಪದ ಇಲ್ಲದ ಜಾಗವೇ ಇಲ್ಲ. ಊರಿಂದ ಊರಿಗೆ, ಬಾಯಿಂದ ಬಾಯಿಗೆ ಸತ್ಯವನ್ನು ಹರಡಿದ್ದು ಜನಪದ. ಇದು ಬದುಕನ್ನು ಕಲಿಸುವ ಪದ. ನಾವು ಪ್ರಕೃತಿಯ ಅವಿಭಾಜ್ಯ ಅಂಗ ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಅಪ್ಪಿ ಕೃಷ್ಣ ಪಾಣಾರ ಇವರನ್ನು ಬೆಳ್ಳೆ ಗ್ರಾಮ ಪಂಚಾಯಿತಿ, ಬೆಳ್ಳೆ ವ್ಯ,ಸೇ,ಸಹಾಕಾರಿ ಸಂಘ, ನವೋದಯ ಒಕ್ಕೂಟ, ಕೆನರಾ ಬ್ಯಾಂಕ್ ಮಧ್ವನಗರ ಶಾಖೆ, ಪಾಣಾರ ಯಾನೆ ನಲಿಕೆಯವರ ಜಿಲ್ಲಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಪಾಣಾರ ಯಾನೆ ನಲಿಕೆಯವರ ಸಂಘದಿಂದ ಸಮುದಾಯಕ್ಕೆ ನೀಡುತ್ತಿರುವ ಬೆಂಬಲ ಹಾಗೂ ಸಹಕಾರಕ್ಕೆ ತಹಸೀಲ್ದಾರ್ ಡಾ.ಪ್ರತಿಭಾ ಆರ್, ಗ್ರಾಮ ಆಡಳಿತಾಧಿಕಾರಿ ಪ್ರದೀಪ್ ಕುಮಾರ್, ಗ್ರಾ,ಪಂ.ಉಪಾಧ್ಯಕ್ಷ ಶಶಿಧರ ವಾಗ್ಲೆ, ಗ್ರಾಮ ಸಹಾಯಕರಾಗಿ ೩೨ವರ್ಷ ಸೇವೆ ನೀಡಿದ ನ್ಯಾನ್ಸಿ ಡಿಸೋಜ, ಸಮಾಜ ಸೇವಕ ಸುಂದರ, ಜಾನಪದ ವಿದ್ವಾಂಸ ಎಸ್.ಎ.ಕೃಷ್ಣಯ್ಯ, ೩೦ ವರ್ಷದ ಬಳಿಕ ಪಿಯುಸಿ ಬರೆದು ಉನ್ನತಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ ಸುನೀತಾ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.

ಮೂಡುಬೆಳ್ಳೆ ಪಾಣಾರ ಸಂಘದ ಅಧ್ಯಕ್ಷ ರಾಜು ಪಾಣಾರ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಶುಭ ಹಾರೈಸಿದರು.

ಅಕಾಡೆಮಿಯ ರಿಜಿಸ್ಟ್ರಾರ್ ನಮೃತಾ, ಅಕಾಡೆಮಿಯ ವಲಯ ಸಂಯೋಜಕ ಡಾ.ಜಮೀರುಲ್ಲಾ ಶರೀಫ್, ಬೆಳ್ಳೆ ಗ್ರಾಪಂ ಅಧ್ಯಕ್ಷೆ ದಿವ್ಯಾ ವಿ.ಆಚಾರ್ಯ, ಪಾಣಾರ ಸಂಘದ ಗೌರವ ಅಧ್ಯಕ್ಷ ಸುಧಾಕರ ಪಾಣಾರ ಬೆಳ್ಳೆ, ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ, ಮಾಜಿ ತಾ.ಪಂ.ಅಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಉದ್ಯಮಿ ವಿನ್ಸೆಂಟ್ ಫರ್ನಾಂಡಿಸ್ ಬೆಳ್ಳೆ, ಬೆಳ್ಳೆ ಸೊಸೈಟಿ ಅಧ್ಯಕ್ಷ ಶಿವಾಜಿ ಎಸ್.ಸುವರ್ಣ, ಪಾಣಾರ ಸಂಘ ಉಡುಪಿ ಜಿಲ್ಲಾ ಅಧ್ಯಕ್ಷ ಪಂಡುರಂಗ ಪಡ್ಡಾಮ ಮತ್ತಿತರರಿದ್ದರು.

ಬೆಳ್ಳೆ ಗ್ರಾ,ಪಂ.ಉಪಾಧ್ಯಕ್ಷ ಶಶಿಧರ ವಾಗ್ಲೆ ಸ್ವಾಗತಿಸಿದರು. ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ನಿರೂಪಿಸಿ, ವಂದಿಸಿದರು.