ವೈಭವಿ ಆಚಾರ್ಯ ಸಾಧನೆ ಬೇರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಯಶ್ಪಾಲ್‌

| Published : Apr 30 2024, 02:01 AM IST

ವೈಭವಿ ಆಚಾರ್ಯ ಸಾಧನೆ ಬೇರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಯಶ್ಪಾಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಸುಬ್ರಮಣ್ಯ ನಗರದ ವೈಭವಿ ಆಚಾರ್ಯ ಅವರಿಗೆ ಅವರ ನಿವಾಸದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ನಗರ ಬಿಜೆಪಿ ವತಿಯಿಂದ ಸನ್ಮಾನಿಸಿ, 10,000 ರು. ಪ್ರತಿಭಾ ಪುರಸ್ಕಾರ ನೀಡಿ ಅಭಿನಂದನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಉಡುಪಿ ಸುಬ್ರಮಣ್ಯ ನಗರದ ವೈಭವಿ ಆಚಾರ್ಯ ಅವರಿಗೆ ಅವರ ನಿವಾಸದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ನಗರ ಬಿಜೆಪಿ ವತಿಯಿಂದ ಸನ್ಮಾನಿಸಿ, 10,000 ರು.ಪ್ರತಿಭಾ ಪುರಸ್ಕಾರ ನೀಡಿ ಅಭಿನಂದನೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ವೈಭವಿ ಆಚಾರ್ಯ ನಿರಂತರ ಪರಿಶ್ರಮದಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉನ್ನತ ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದು, ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಹಾಗೂ ಪೊಡವಿಗೊಡೆಯ ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹದಿಂದ ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಸ್ಥಳೀಯ ನಗರಸಭಾ ಸದಸ್ಯರಾದ ಜಯಂತಿ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ವೈಭವಿ ಶೆಟ್ಟಿ ಪೋಷಕರಾದ ಶಂಖಪಾಲ ಆಚಾರ್ಯ, ವಿದ್ಯಾ ಎಸ್. ಆಚಾರ್ಯ, ಪಕ್ಷದ ಪ್ರಮುಖರಾದ ಉಮೇಶ್ ಶೆಟ್ಟಿ, ಚಿನ್ಮಯ ಮೂರ್ತಿ, ಶ್ರೀನಿವಾಸ್ ಹಾಗೂ ಕಾರ್ಯಕರ್ತರು ಇದ್ದರು.