ಬಿಜೆಪಿ ಪರ ಒಲವಿನ ಮಾಯಕೊಂಡ ಕ್ಷೇತ್ರ: ಗಾಯತ್ರಿ ಸಿದ್ದೇಶ್ವರ

| Published : Apr 27 2024, 01:19 AM IST

ಬಿಜೆಪಿ ಪರ ಒಲವಿನ ಮಾಯಕೊಂಡ ಕ್ಷೇತ್ರ: ಗಾಯತ್ರಿ ಸಿದ್ದೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ಮಾಯಕೊಂಡ ವಿಧಾನಸಭಾ ಕ್ಷೇತ್ರವು ಸದಾ ಬಿಜೆಪಿ ಪರ ಒಲವು ಇರುವಂತಹ ಕ್ಷೇತ್ರವಾಗಿದೆ. ಇಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಬಿಜೆಪಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದ್ದಾರೆ.

- ಎಸ್.ಎ.ರವೀಂದ್ರನಾಥ, ಜಿ.ಎಂ.ಸಿದ್ದೇಶ್ವರ ಈ ಕ್ಷೇತ್ರಕ್ಕೆ ಸಾಕಷ್ಟು ದುಡಿದಿದ್ದಾರೆ ಎಂದು ಶ್ಲಾಘನೆ । ವಿವಿಧೆಡೆ ಮತಯಾಚನೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ, ಏ.26

ಮಾಯಕೊಂಡ ವಿಧಾನಸಭಾ ಕ್ಷೇತ್ರವು ಸದಾ ಬಿಜೆಪಿ ಪರ ಒಲವು ಇರುವಂತಹ ಕ್ಷೇತ್ರವಾಗಿದೆ. ಇಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಬಿಜೆಪಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.

ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಆನಗೋಡು, ಬಾಡ, ಮಾಯಕೊಂಡ ಗ್ರಾಮಗಳಲ್ಲಿ ಶುಕ್ರವಾರ ಪ್ರಚಾರ ಸಭೆಯಲ್ಲಿ ಮತಯಾಚಿಸಿದ ಅವರು, ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ, ತಾಂತ್ರಿಕ ಶಿಕ್ಷಣ ಒದಗಿಸಲು ಯೋಜನೆ ರೂಪಿಸುತ್ತಿದ್ದೇವೆ. ಸರ್ಕಾರಿ ಡಿಪ್ಲೊಮಾ ಹಾಗೂ ವೃತ್ತಿ ಪರ ಕೋರ್ಸ್‌, ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಕೇಂದ್ರ ಸಹ ಆರಂಭಿಸಲಾಗುವುದು ಎಂದರು.

ಮಾಯಕೊಂಡ ಕ್ಷೇತ್ರದಲ್ಲಿ ಮಾಜಿ ಶಾಸಕರಾದ ಎಂ.ಬಸವರಾಜ ನಾಯ್ಕ, ಪ್ರೊ. ಎನ್.ಲಿಂಗಣ್ಣ ಸಾಕಷ್ಟು ಕೆಲಸ ಮಾಡಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ ತ್ಯಾವಣಗಿಯಲ್ಲಿ ಬೀಜೋತ್ಪಾದನಾ ಕೇಂದ್ರದ ಬಲವರ್ಧನೆಗೆ ₹1.5 ಕೋಟಿ, ಬಸವಾಪಟ್ಟಣ- ತ್ಯಾವಣಗಿಯಲ್ಲಿ ರೈತ ಸಂಪರ್ಕ ಕಟ್ಟಡ ನಿರ್ಮಾಣಕ್ಕೆ ₹1.20 ಕೋಟಿ ಅನುದಾನ ನೀಡಿದ್ದಾರೆ. ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಸಮುದಾಯ ಭವನ, ಸಹಕಾರ ಸಂಘದ ಕಟ್ಟಡ, ಸಿಸಿ ರಸ್ತೆ, ರಂಗಮಂದಿರ, ಶಾಲಾ ಕೊಠಡಿ, ಶುದ್ಧ ಕುಡಿಯುವ ನೀರಿನ ಘಟಕ, ಬಸ್ ತಂಗುದಾಣ ಸೇರಿದಂತೆ ವಿವಿಧ ಕಾಮಗಾರಿ ಕೈಗೊಂಡಿದ್ದಾರೆ. ನಿಮ್ಮ ಸೇವೆಗೆ ನನಗೆ ಅವಕಾಶ ಮಾಡಿಕೊಡಿ. ಚುನಾವಣೆಯಲ್ಲಿ ನನ್ನ ಕ್ರಮ ಸಂಖ್ಯೆ 1, ಗುರುತು ಕಮಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡುವಂತೆ ಕೋರಿದರು.

ಮಾಜಿ ಶಾಸಕ ಪ್ರೊ. ಎನ್.ಲಿಂಗಣ್ಣ ಮಾತನಾಡಿ, ಸಂಸದ ಸಿದ್ದೇಶಣ್ಣ ನಾನು ಏನು ಕೇಳಿದರೂ ಇಲ್ಲವೆನ್ನದೇ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಸಿದ್ದೇಶಣ್ಣನ ಸೇವಾ ಮನೋಭಾವವೇ 20 ವರ್ಷ ನಮ್ಮ ಜೊತೆಯಲ್ಲಿ ಇರುವಂತೆ ಮಾಡಿತ್ತು. ಈಗ ಗಾಯತ್ರಿ ಸಿದ್ದೇಶ್ವರ ಮಾತೃಸ್ವರೂಪಿಯಾಗಿ ಬಂದಿದ್ದಾರೆ. ಗಾಯತ್ರಮ್ಮನನ್ನು ಗೆಲ್ಲಿಸಿ, ಲೋಕಸಭೆಗೆ ಕಳುಹಿಸುವ ಜವಾಬ್ದಾರಿ ನಮ್ಮ, ನಿಮ್ಮೆಲ್ಲರ ಮೇಲಿದೆ ಎಂದರು.

ಮಾಜಿ ಶಾಸಕ ಬಸವರಾಜ ನಾಯ್ಕ್ ಮಾತನಾಡಿದರು. ಮುಖಂಡರಾದ ಅಣಬೇರು ಜೀವನಮೂರ್ತಿ, ರಾಜ್ಯ ಯುವ ಮೋರ್ಚಾದ ಉಪಾಧ್ಯಕ್ಷ ಜಿ.ಎಸ್. ಶ್ಯಾಮ್ ಮಾಯಕೊಂಡ, ಮಂಡಲ ಅಧ್ಯಕ್ಷ ದೇವೇಂದ್ರಪ್ಪ, ಹನುಮಂತನಾಯ್ಕ, ಮಂಜಾನಾಯ್ಕ, ಗಂಗಾನಾಯ್ಕ, ಗ್ಯಾರಳ್ಳಿ ಶಿವಕುಮಾರ್, ಹನುಮಂತಪ್ಪ, ಮಂಡಲ ಸದಸ್ಯರು, ಗ್ರಾಪಂ ಸದಸ್ಯರು, ಬೂತ್ ಮಟ್ಟದ ಅಧ್ಯಕ್ಷರು, ಗ್ರಾಮದ ಮುಖಂಡರು ಸೇರಿದಂತೆ ಕ್ಷೇತ್ರದ ಮುಖಂಡರು, ಗ್ರಾಮಸ್ಥರು ಇದ್ದರು.

ಗಾಯತ್ರಿ ಸಿದ್ಧೇಶ್ವರ ಅವರು ಪ್ರಚಾರದ ವೇಳೆ ತೋಳಹುಣಸೆಯಲ್ಲಿ ಲಂಬಾಣಿ ಸಮುದಾಯದ ಸಾಂಪ್ರದಾಯಿಕ ವಸ್ತ್ರ ಧರಿಸಿ, ಸಮುದಾಯದ ಮಹಿಳೆಯರೊಂದಿಗೆ ನೃತ್ಯದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಮುಸ್ಲಿಂ ಸಮುದಾಯದವರು ಗಾಯತ್ರಿ ಅವರನ್ನು ಭೇಟಿಯಾಗಿ ಶುಭ ಹಾರೈಸಿ, ನಮ್ಮ ಮತ ನಿಮಗೆ ಎಂದಿದ್ದು ವಿಶೇಷವಾಗಿತ್ತು.

- - - ಟಾಪ್‌ ಕೋಟ್‌

ಗಾಯತ್ರಿ ಸಿದ್ದೇಶ್ವರ ಪರ ಕ್ಷೇತ್ರದ ಜನ ಜಾತ್ಯತೀತ, ಧರ್ಮಾತೀತವಾಗಿ ಬೆಂಬಲ ನೀಡುತ್ತಿದ್ದಾರೆ. ಸಂಸದ ಜಿ.ಎಂ.ಸಿದ್ಧೇಶ್ವರ, ಗಾಯತ್ರಿ ಸಿದ್ಧೇಶ್ವರ ಪರ ಅಲ್ಪಸಂಖ್ಯಾತರು ಬೆಂಬಲಿಸುತ್ತಿದ್ದಾರೆ. ನಮ್ಮ ಎನ್‌ಡಿಎ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ಮೋದಿ ಮತ್ತೆ 3ನೇ ಬಾರಿಗೆ ಪ್ರಧಾನಿ ಖಚಿತ

- ಆನಂದಪ್ಪ ಮಾಯಕೊಂಡ, ಜೆಡಿಎಸ್ ಮುಖಂಡ

- - - -26ಕೆಡಿವಿಜಿ9, 10:

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಯಕೊಂಡ ಕ್ಷೇತ್ರದಲ್ಲಿ ಮತಯಾಚಿಸಿದರು.

- - - -26ಕೆಡಿವಿಜಿ11, 12:

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಯಕೊಂಡ ಕ್ಷೇತ್ರದ ತೋಳಹುಣಸೆ ಗ್ರಾಮದಲ್ಲಿ ಲಂಬಾಣಿ ಸಮುದಾಯದ ಸಾಂಪ್ರಾದಾಯಿಕ ಉಡುಪು ಧರಿಸಿ, ಸಮಾಜದ ಮಹಿಳೆಯರೊಂದಿಗೆ ಹೆಜ್ಜೆ ಹಾಕಿದರು. - - -

-26ಕೆಡಿವಿಜಿ13, 14:

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಯಕೊಂಡ ಕ್ಷೇತ್ರದಲ್ಲಿ ಮತಯಾಚಿಸಿದರು.