ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ

| Published : Nov 24 2025, 03:30 AM IST

ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಅನಿಲ್ ಲೋಬೋ ಅವರಿಗೆ ೨೦೨೫ ರ ಪ್ರತಿಷ್ಠಿತ ‘ತೌಳವ ಸಹಕಾರಿ ಮಾಣಿಕ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ ೭೨ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆ ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ ನಡೆದ ೭೨ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೋ ಅವರಿಗೆ ೨೦೨೫ ರ ಪ್ರತಿಷ್ಠಿತ ‘ತೌಳವ ಸಹಕಾರಿ ಮಾಣಿಕ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ ೭೨ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆಯ ಜೈನಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶಿವ ದುರ್ಗಾಂಬಾ ಮಠದ ಶ್ರೀಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಾಜಿ ಸಚಿವ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅತಿಥಿಗಳಾಗಿದ್ದರು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.ಅದಾನಿ ಗ್ರೂಪ್‌ನ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮೋಹನಂಗಯ್ಯ ಸ್ವಾಮಿ, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ವಕೀಲರ ಘಟಕ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ರಾಘವೇಂದ್ರ ರಾವ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿ ಮತ್ತಿತರರಿದ್ದರು. ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ೨೦೨೫ ಪಡೆದ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರಿಗೆ ಎಂಸಿಸಿ ಬ್ಯಾಂಕಿನ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಬ್ಯಾಂಕಿನ ಆಡಳಿತ ಕಚೇರಿಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ ಯೋಜಿಸಿತ್ತು.ಸಹಕಾರ ರತ್ನ ಅನಿಲ್ ಲೋಬೊ ಮಾತನಾಡಿ, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರಿಗೆ ಸಮಾರಂಭವನ್ನು ಆಯೋಜಿಸಿದ್ದಕ್ಕಾಗಿ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸಿದರು. ಈ ಗೌರವ ನಿರ್ದೇಶಕರು ಮತ್ತು ಸಿಬ್ಬಂದಿಯ ಪ್ರತಿಯೊಬ್ಬ ಸದಸ್ಯರ ಸಾಮೂಹಿಕ ಸಾಧನೆಯಾಗಿದೆ, ಎಲ್ಲರ ಸಮರ್ಪಿತ ಸೇವೆ ಬ್ಯಾಂಕಿನ ಪ್ರಗತಿಗೆ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ನಿರ್ದೇಶಕರ ಪರವಾಗಿ ಮಾತನಾಡಿದ ನಿರ್ದೇಶಕ ಎಲ್ರಾಯ್ ಕೆ. ಕ್ರಾಸ್ಟೊ, ಬ್ಯಾಂಕಿನ ಅಧ್ಯಕ್ಷರ ಶ್ಲಾಘನೀಯ ಕೆಲಸಕ್ಕೆ ದೊರೆತ ಅರ್ಹವಾದ ಮನ್ನಣೆಗೆ ಸಂತೋಷ ವ್ಯಕ್ತಪಡಿಸಿದರು. ರೋಶನ್ ಮಾಡ್ತಾ ನಿರೂಪಿಸಿದರು.