ಕನ್ನಡಪ್ರಭ ವಾರ್ತೆ ಮೈಸೂರು

ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಅಂತೆಯೇ ಜೂ. 27 ರಂದು ಕೆಂಪೇಗೌಡ ಜಯಂತಿಯನ್ನು ಆಚರಿಸುವುದಾಗಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಜಯಂತಿ ಆಚರಣೆ ಸಂಬಂಧ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೆಂಪೇಗೌಡ ಜಯಂತಿಯನ್ನು ಅಂದು ಬೆಳಗ್ಗೆ 11.30ಕ್ಕೆ ಕಲಾಮಂದಿರದಲ್ಲಿ ಆಚರಿಸಲಾಗುವುದು ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ಸಾನ್ನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸುವುದಾಗಿ ಹೇಳಿದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿ ಆಚರಿಸಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶಗಳನ್ನು ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


ವೇದಿಕೆಯ ಮೇಲೆ ಗಣ್ಯರಿಗೆ ಬೊಕ್ಕೆ ನೀಡಿ ಸ್ವಾಗತಿಸುವ ಬದಲು ಆಯಾ ಜಯಂತಿಗಳಲ್ಲಿ ಆ ಮಹನೀಯರ ಜೀವನ ಚರಿತ್ರೆ ಕುರಿತ ಪುಸ್ತಕಗಳನ್ನು ನೀಡಿ ಸ್ವಾಗತಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಯಂತಿಗಳು ನಡೆಯುವ ಸ್ಥಳದ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ ಹಾಗೂ ಶಾಮಿಯಾನ ವ್ಯವಸ್ಥೆಯನ್ನು ನಗರ ಪಾಲಿಕೆಯ ವತಿಯಿಂದ ಮಾಡಬೇಕು. ವಿವಿಧ ಜಯಂತಿಗಳ ಆಚರಣೆ ಮಾಡುವಾಗ ಮೈಸೂರು ನಗರದಲ್ಲಿ ಇರುವ ಎಲ್ಲಾ ಮಹನೀಯರ ಪ್ರತಿಮೆಗಳನ್ನು ನಗರ ಪಾಲಿಕೆ ವತಿಯಿಂದ ಸ್ವಚ್ಛ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದರು.

ಸಮುದಾಯದ ಮುಖಂಡರು ಮಾತನಾಡಿ, ತಮ್ಮ ಜಯಂತಿಗಳ ಆಚರಣೆಯ ಸಾನ್ನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡುವುದಾಗಿ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಇದ್ದರು.ಜು.2ರಂದು ಡಾ.ಫ.ಗು.ಹಳಕಟ್ಟಿ ಜಯಂತಿ ಹಾಗೂ ವಚನ ಸಾಹಿತ್ಯ ದಿನಾಚರಣೆಕನ್ನಡಪ್ರಭ ವಾರ್ತೆ ಮೈಸೂರು

ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜು. 2 ರಂದು ಆಚರಿಸಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಜಯಂತಿಯ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ದಿನಾಚರಣೆಯನ್ನು ಅಂದು ಬೆಳಗ್ಗೆ 11.30ಕ್ಕೆ ಕ ಕಲಾಮಂದಿರದಲ್ಲಿ ಆಚರಿಸಲಾಗುವುದು. ವೇದಿಕೆ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಇದ್ದರು.