ಸಾರಾಂಶ
ಗಣ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜಿಲ್ಲಾಡಳಿತದಿಂದ ಜ.26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಆಟದ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಪಥ ಸಂಚಲನ ನಡೆಯಲಿದೆ ಎಂದರು.
- ಗಣ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವ ಸಿದ್ದತಾ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲಾಡಳಿತದಿಂದ ಜ.26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಗಣ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಆಟದ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದ ಅವರು, ಪಥ ಸಂಚಲನದಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್‌ಸಿಸಿ ತಂಡಗಳು ಭಾಗವಹಿಸಲಿವೆ ಎಂದರು.ಕಾರ್ಯಕ್ರಮಗಳ ಸಿದ್ಧತೆಗೆ ವಿವಿಧ ಸಮಿತಿ ರಚಿಸಿ ಪೂರ್ವ ತಯಾರಿಗೆ ಉಪ ಸಮಿತಿಗಳು ಸಭೆ ಕರೆದು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಸಿದ್ಧಪಡಿಸಿ ಜನ ಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಬೇಕು. ಯಾವುದೇ ಲೋಪವಾಗದಂತೆ ಕ್ರಮ ವಹಿಸ ಬೇಕೆಂದು ಹೇಳಿದರು.ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಅವರು, ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ವರ್ಗ ಕಡ್ಡಾಯವಾಗಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.12 ಕೆಸಿಕೆಎಂ 2ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಗಣ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಯಿತು.