ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ತಾಪಂ ಇಒ ಅಪೂರ್ವ ಅನಂತರಾಮು ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ತಾಪಂ ಇಒ ಅಪೂರ್ವ ಅನಂತರಾಮು ತಿಳಿಸಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಜ.೨೬ ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಜ.೨೬ ರಂದು ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಆಡಳಿತದಿಂದ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ತಾಲೂಕಿನ ಎಲ್ಲಾ ಅಧಿಕಾರಿಗಳು, ಗಣ್ಯರು, ಮುಖಂಡರು ಹಾಗೂ ಸಾರ್ವಜನಿಕರ ಸಹಕಾರ ಮುಖ್ಯ. ಮುಖ್ಯವಾಗಿ ಪೊಲೀಸ್ ಇಲಾಖೆ, ಸ್ಕೌಟ್ ಮತ್ತು ಗೈಡ್ಸ್, ವಿವಿಧ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಈ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಜೂನಿಯರ್ ಕಾಲೇಜು ಮೈದಾನದವರೆಗೆ ಕೊರಟಗೆರೆ ಆಳಿದ ರಣಬೈರೇಗೌಡ, ಸಿದ್ದರಬೆಟ್ಟ ಆಳಿದ ಕುರಂಗರಾಜ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಭಾರತ ಸಂವಿಧಾನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪೋಸ್ಟರ್‌ಗಳು, ಚೆನ್ನರಾಯನದುರ್ಗ ಹಾಗೂ ಸಿದ್ಧರಬೆಟ್ಟದ ಇತಿಹಾಸ ತಿಳಿಸುವ ಪೋಸ್ಟರ್‌ಗಳು ಹಾಗೂ ವಿವಿಧ ಶಾಲಾ ಮಕ್ಕಳಿಂದ ವೇಷಭೂಷಣ ಧರಿಸಿ ಬರುವ ವಿದ್ಯಾರ್ಥಿ ಟ್ರ್ಯಾಕ್ಟರ್ ಮೂಲಕ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಬರಲಾಗುವುದು, ಇದರ ಜೊತೆಗೆ ವಿವಿಧ ರಂಗದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು.ಇದೆ ಸಂದರ್ಭದಲ್ಲಿ ಗ್ರೇಟ್ ೨ ತಹಸೀಲ್ದಾರ್ ರಾಮಪ್ರಸಾದ್, ತಾಲೂಕು ಮಟ್ಟದ ಅಧಿಕಾರಿಗಳಾದ ಶಿಲ್ಪ, ಯಮುನಾ, ಫೈರೋಜ್ ಬೇಗಮ್, ಅನಂತರಾಜು, ರುದ್ರಪ್ಪ, ರಾಮಾಂಜಿನಪ್ಪ, ಮೋಹನ್, ಎಎಸೈ ಗೋವಿಂದನಾಯ್ಕ್, ಮಧುಸೂದನ್, ರುದ್ರೇಶ್, ಪಪಂ ಮುಖ್ಯಾಧಿಕಾರಿ ಉಮೇಶ್, ಬಸವರಾಜು, ನಂದೀಶ್, ದಾಡಿವೆಂಕಟೇಶ್, ಶಿವರಾಮಣ್ಣ, ಭೀಮಣ್ಣ, ಅಟಿಕ ನಾಗರಾಜು, ಸೇರಿದಂತೆ ಇತರರು ಇದ್ದರು.