ಸಾರಾಂಶ
20 ನಾರಾಯಣಗುರು, 19ಕ್ಕೆ ನುಲಿಯ ಚಂದಯ್ಯ ಜಯಂತಿ ಆಚರಣೆ ।ಎಡಿಸಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ
-------ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 26 ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಸಲಾಯಿತು. ಇದೇ ಮೊದಲ ಬಾರಿಗೆ ಯಾದವ ಗುರುಪೀಠದ ಸಮೀಪದ ಕೃಷ್ಣ ವೃತ್ತದಲ್ಲಿ ಜಯಂತಿ ಆಚರಿಸುತ್ತಿರುವುದು ವಿಶೇಷ.ಅಂದು ಮಧ್ಯಾಹ್ನ 12ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಸಮಾರಂಭದಲ್ಲಿ ಶ್ರೀಕೃಷ್ಣ ಅವರ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು. ಕಾರ್ಯಕ್ರಮ ಎಲ್ಲಿಯೂ ಲೋಪವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಸಮಾಜದ ಮುಖಂಡರ ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮ ಆಯೋಜಿಸಬೇಕೆಂದು ಹೇಳಿದರು.
ಜಿಲ್ಲಾ ಯಾದವ ಸಂಘದ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಕಾರ್ಯದರ್ಶಿ ಆನಂದಪ್ಪ, ತಹಸೀಲ್ದಾರ್ ಡಾ.ನಾಗವೇಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ ಇದ್ದರು.ಬಾಕ್ಸ:20 ರಂದು ನಾರಾಯಣಗುರು ಜಯಂತಿ
ಜಿಲ್ಲಾ ಕೇಂದ್ರದಲ್ಲಿ ಆ.20ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಭೆ ತೀರ್ಮಾನಿಸಿತು.ಆರ್ಯ ಈಡಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜೀವನ್ ಮಾತನಾಡಿ, ಆರ್ಯ ಈಡಿಗರ ಸಂಘವು ಸ್ಥಾಪನೆಯಾಗಿ 25 ವರ್ಷಗಳು ಪೂರೈಸಿದ್ದು, ಸಂಘದ ನೆನಪಿಗಾಗಿ ಈ ಬಾರಿಯ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಸಮಾಜದ ವತಿಯಿಂದ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗುವುದು. ಹಾಗಾಗಿ ಸರ್ಕಾರದ ವತಿಯಿಂದ ಆಚರಿಸುವ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಆರ್ಯ ಈಡಿಗರ ಸಂಘದ ಖಜಾಂಚಿ ಬಸವರಾಜ್, ತಾಲೂಕು ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ್ , ಸಮಾಜದ ಮುಖಂಡರು ಇದ್ದರು.ಬಾಕ್ಸ:19ಕ್ಕೆ ನುಲಿಯ ಚಂದಯ್ಯ ಜಯಂತಿ ಆದ್ಧೂರಿ ಆಚರಣೆ
ಆ.19 ರಂದು ಶಿವಶರಣ ನುಲಿಯ ಚಂದಯ್ಯ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ತೀರ್ಮಾನಿಸಿತು. ಅಂದು ಬೆಳಗ್ಗೆ 9 ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ನುಲಿಯ ಚಂದಯ್ಯನವರ ಭಾವಚಿತ್ರದ ಮೆರವಣಿಗೆ ನಡೆಸಿ, ನಂತರ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.ಸರ್ಕಾರದಿಂದ ಜಯಂತಿ ಆಚರಣೆ ₹50 ಸಾವಿರ ಅನುದಾನ ನೀಡಲಾಗುತ್ತದೆ. ಇದರಲ್ಲಿ ವೇದಿಕೆ ಸಜ್ಜುಗೊಳಿಸುವುದು, ಆಹ್ವಾನ ಪತ್ರಿಕೆ, ಉಪನ್ಯಾಸಕರ ಗೌರವಧನ, ಬ್ಯಾನರ್, ಸಂಗೀತ ಕಾರ್ಯಕ್ರಮ ಹಾಗೂ ಜಯಂತಿ ಆಗಮಿಸುವವರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದರು. ಈ ವೇಳೆ ಕೊರಮ ಸಮಾಜದ ಅಧ್ಯಕ್ಷ ಕೃಷ್ಣಪ್ಪ ವಿವಿಧ ಇಲಾಖೆ ಅಧಿಕಾರಿಗಳು ಸಮಾಜದ ಮುಖಂಡರು ಇದ್ದರು.
----ಪೋಟೋ ಕ್ಯಾಪ್ಸನ್:7 ಸಿಟಿಡಿ1
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಶ್ರೀಕೃಷ್ಣಜಯಂತಿ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.;Resize=(128,128))
;Resize=(128,128))
;Resize=(128,128))