ಅಪಘಾತಗಳ ನಿಯಂತ್ರಣಕ್ಕೆ ಕ್ರಮ

| Published : Aug 30 2025, 01:00 AM IST

ಅಪಘಾತಗಳ ನಿಯಂತ್ರಣಕ್ಕೆ ಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದರು.

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ವಾರಾಂತ್ಯದಲ್ಲಿ ಟ್ರಾಫಿಕ್ ಸಮಸ್ಯೆ. ಆದರೇ ಇದುವರೆಗೆ ಯಾವುದೇ ಕ್ರಮ ಆಗಿಲ್ಲ. ಪದೇ ಪದೇ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಅದಕ್ಕೆ ಅಪಘಾತ ಸಂಬವಿಸಲು ಕಾರಣ ಏನು ಎಂಬುದು ವೈಜ್ಞಾನಿಕವಾಗಿ ತಿಳಿದು ಅದನ್ನು ಪರಿಹರಿಸಿ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್‌ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಉಬ್ಬುಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.

ಎಸ್ಪಿ ಸಿ.ಕೆ.ಬಾಬಾ ಮಾತನಾಡಿ, ಬೆಂಗಳೂರು- ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಪಾಟ್‌ಗಳ ಪಟ್ಟಿಯನ್ನು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ನೀಡಲಾಗುವುದು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಆ ಸ್ಥಳದಲ್ಲಿನ ಸಮಸ್ಯೆ ಬಗೆಹರಿಸಬೇಕು ಎಂದರು.

ಸಭೆಯಲ್ಲಿ ಪಿಡಬ್ಲ್ಯೂಡಿ ನ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸಾರಿಗೆ ಅಧಿಕಾರಿಗಳು ಉಪಸ್ಥಿತರಿದ್ದರು.

29ಕೆಡಿಬಿಪಿ1- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ಜಿಲ್ಲಾಧಿಕಾರಿ ಬಸವರಾಜು ಅಧ್ಯಕ್ಷತೆಯಲ್ಲಿ ನಡೆಯಿತು.