ಸಾರಾಂಶ
ಕಂಪ್ಲಿ: ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಲು ನಿತ್ಯ 5 ಗಂಟೆಗಳ ಕಾಲ ನೀರು ಬಿಡುವ ಕುರಿತು ತೀರ್ಮಾನಿಸಲಾಗಿದೆ. ಗ್ರಾಮಸ್ಥರು ಸಹಕರಿಸಬೇಕು ಎಂದು ಸಣಾಪುರ ಪಿಡಿಒ ಶೇಷಗಿರಿ ತಿಳಿಸಿದರು.ತಾಲೂಕಿನ ಸಣಾಪುರ ಗ್ರಾಪಂ ಸಭಾಂಗಣದಲ್ಲಿ ನಡೆದ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.ರಾಜ್ಯಾದ್ಯಂತ ಬರಗಾಲ ಆವರಿಸಿದೆ. ಎಲ್ಲೆಡೆ ಅಂತರ್ಜಲ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗದಂತೆ ಸೂಕ್ತ ಕ್ರಮ ಜರುಗಿಸಬೇಕಾಗಿದೆ. ನಿತ್ಯ 24ಗಂಟೆಗಳ ಕಾಲ ಗ್ರಾಮದಲ್ಲಿ ನೀರನ್ನು ಪೂರೈಸಲಾಗುತ್ತಿತ್ತು, ಆದರೆ ಇದೀಗ ನಿತ್ಯ 5 ಗಂಟೆಗಳ ಕಾಲ ನೀರು ಪೂರೈಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಇದಕ್ಕೆ ಸಹಕರಿಸಬೇಕು. ಇನ್ನುಳಿದಂತೆ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾದಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಸುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದೆ ವೇಳೆ ಗ್ರಾಪಂ ವ್ಯಾಪ್ತಿಯಲ್ಲಿನ ವಿವಿಧ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂತಿ ಅಧ್ಯಕ್ಷ ವೈ.ರಮಣಯ್ಯ, ಉಪಾಧ್ಯಕ್ಷೆ ಸಾವಿತ್ರಮ್ಮ, ಸದಸ್ಯರಾದ ವೀರನಗೌಡ, ಸಿದ್ದಪ್ಪ, ಹೊನ್ನೂರಮ್ಮ, ಜ್ಯೋತಿ, ಭಾರತಿ ಪ್ರಕಾಶ್, ನಾಗಮ್ಮ, ಗೂಳಮ್ಮ, ಹೊನ್ನೂರಮ್ಮ, ಈರಮ್ಮ ಸೇರಿದಂತೆ ಗ್ರಾಪಂ ಸಿಬ್ಬಂದಿ ಇದ್ದರು.