ದಾವಣಗೆರೆ ಐವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ

| Published : Jan 03 2025, 12:30 AM IST / Updated: Jan 03 2025, 06:38 AM IST

ದಾವಣಗೆರೆ ಐವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ ಓರ್ವ ಮಹಿಳಾ ಪತ್ರಕರ್ತೆ ಸೇರಿದಂತೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.

ದಾವಣಗೆರೆ: ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ ಓರ್ವ ಮಹಿಳಾ ಪತ್ರಕರ್ತೆ ಸೇರಿದಂತೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಸ್ಥಾನಿಕ ಸಂಪಾದಕ ಸಿದ್ದಯ್ಯ ಹಿರೇಮಠ, ದೂರದರ್ಶನದ ಎ.ಎಲ್.ತಾರಾನಾಥ, ವಿಜಯವಾಣಿ ಹಿರಿಯ ವರದಿಗಾರ ರಮೇಶ ಜಹಗೀರದಾರ್, ಸುಭಾಷಿತ ಪತ್ರಿಕೆ ಸಂಪಾದಕ ಡಾ. ಕೆ.ಜೈಮುನಿ ಹಾಗೂ ಹರಿಹರದ ಲೋಕಪ್ರಭ ಪತ್ರಿಕೆ ಸಂಪಾದಕಿ ಡಿ.ಎನ್.ಶಾಂಭವಿ ನಾಗರಾಜ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾದ ಐವರೂ ಸಾಧಕ ಪತ್ರಕರ್ತರಿಗೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪದಾಧಿಕಾರಿಗಳು, ಸದಸ್ಯರು, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು, ಹಿರಿಯ ಹಾಗೂ ಕಿರಿಯ ಪತ್ರಕರ್ತರು ಅಭಿನಂದಿಸಿದ್ದಾರೆ.