ಸಾರಾಂಶ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಹಾಸನ : ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತ ಹಾಗೂ ಉದಯ ಪತ್ರಿಕೆ ಸಂಪಾದಕ ವೆಂಕಟೇಶ್, ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪಡೆದ ಅತೀಖು ಉರ್ ರೆಹಮನ್, ಟಿವಿ 9 ಜಿಲ್ಲಾ ವರದಿಗಾರ ಮಂಜುನಾಥ್, ಪಬ್ಲಿಕ್ ಟಿವಿ ಕ್ಯಾಮಾರ ಮೆನ್ ನಾಗೇಶ್, ಹಾಗೂ ಬೇಲೂರು ತಾಲೂಕು ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ರಘುನಾಥ್, ಪ್ರಧಾನ ಕಾರ್ಯದರ್ಶಿ ಶಿವರಾಜು ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇಳೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತ ವೆಂಕಟೇಶ್ ಮಾತನಾಡಿ, ವಿಶೇಷವಾದ ಲೇಖನ ಬರೆದಿರುವುದಕ್ಕೆ ಈ ಮಾಧ್ಯಮ ಪ್ರಶಸ್ತಿ ದೊರಕಿದೆ. ಪ್ರಸ್ತುತದಲ್ಲಿ ಕೃಷಿ ಎಂಬುದು ಬಹಳ ಸಂಕಷ್ಟದಲ್ಲಿದೆ. ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಕುರಿತು ಲೇಖನ ಬರೆಯಲಾಗಿತ್ತು. ಮಾಧ್ಯಮ ಅಕಾಡೆಮಿ ದೊರಕಿರುವುದಕ್ಕೆ ನಮ್ಮ ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವಿಸಿರುವುದಕ್ಕೆ ನಾನು ಆಭಾರಿ ಆಗಿದ್ದೇನೆ ಎಂದರು.
ರಾಜ್ಯ ಪ್ರಶಸ್ತಿ ಪಡೆದ ಅತೀಖು ಉರ್ ರೆಹಮನ್ ಮಾತನಾಡಿ, ಕಳೆದ ಮುವತೈದು ವರ್ಷಗಳಿಂದ ಪೋಟೊ ಗ್ರಾಫರ್ ಆಗಿ ಕೆಲಸ ನಿರ್ವಹಿಸಲಾಗುತ್ತಿದೆ. ಅಂದಿನಿಂದ ಹಿಂದಿನವರೆಗೂ ಕರ್ತವ್ಯ ನಿರ್ವಹಿಸಿದ ಸೇವೆಗೆ ಸಿಕ್ಕಿರುವ ಪ್ರಶಸ್ತಿಗೆ ಇಲ್ಲಿ ಗೌರವಿಸಿದ್ದಾರೆ ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಿ.ಆರ್. ಮಂಜುನಾಥ್ ಮಾತನಾಡಿ, ಅವರ ಸೇವೆಗೆ ಈ ಪ್ರಶಸ್ತಿ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜವಬ್ಧಾರಿಗಳಿ ಹೆಚ್ಚಾಗಲಿದೆ. ಈ ಪ್ರಶಸ್ತಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವುದಕ್ಕೆ ದಾರಿದೀಪವಾಗಲಿ ಎಂದು ಶುಭ ಹಾರೈಸಿದರು.
ಇದೇ ವೇಳೆ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಎಚ್.ಬಿ. ಮದನ್ ಗೌಡ, ರವಿನಾಕಲಗೂಡು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ಎಚ್. ವೇಣುಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಧರ್, ಉಪಾಧ್ಯಕ್ಷ ಮೋಹನ್ ಕುಮಾರ್, ಕೆ.ಎಂ. ಹರೀಶ್, ಡಿ.ವಿ. ಮೋಹನ್, ಕಾರ್ಯದರ್ಶಿ ಬಿ.ಸಿ. ಸಂತೋಷ್, ಶ್ರೀನಿವಾಸ್ ಪಿ.ಎ, ಇತರರು ಉಪಸ್ಥಿತರಿದ್ದರು.