ಚನ್ನರಾಯಪಟ್ಟಣದಲ್ಲಿ ಪತ್ರಕರ್ತರ ಸಂಘದಿಂದ ಮಾಧ್ಯಮ ದಿನಾಚರಣೆ

| Published : Jul 17 2024, 12:47 AM IST

ಚನ್ನರಾಯಪಟ್ಟಣದಲ್ಲಿ ಪತ್ರಕರ್ತರ ಸಂಘದಿಂದ ಮಾಧ್ಯಮ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನರಾಯಪಟ್ಟಣ ತಾಲೂಕಿನ ಚಿಕ್ಕೋನಹಳ್ಳಿ ಸದ್ಗುರು ಶಿರಡಿ ಸಾಯಿ ಮಂದಿರದಲ್ಲಿ ಜು.17ಕ್ಕೆ ಮಾಧ್ಯಮ ದಿನಾಚರಣೆ ನಡೆಯಲಿದೆ ಎಂದು ಅಧ್ಯಕ್ಷರಾದ ಸಿದ್ದರಾಜು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪತ್ರಕರ್ತರ ಕುಟುಂಬದ ಸದಸ್ಯರಿಗೆ ಹಲವು ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತರಾದ ನಟೇಶ್, ಚಂದ್ರು, ದಯಾನಂದ್‌ರನ್ನು ವಿಶೇಷ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನ ಚಿಕ್ಕೋನಹಳ್ಳಿ ಸದ್ಗುರು ಶಿರಡಿ ಸಾಯಿ ಮಂದಿರದಲ್ಲಿ ಜು.17ಕ್ಕೆ ಮಾಧ್ಯಮ ದಿನಾಚರಣೆ ನಡೆಯಲಿದೆ ಎಂದು ಅಧ್ಯಕ್ಷರಾದ ಸಿದ್ದರಾಜು ತಿಳಿಸಿದರು.ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜುಲೈ ೧೭ರಂದು ಬೆಳಗ್ಗೆ ೧೦ ಗಂಟೆಗೆ ತಾಲೂಕಿನ ಚಿಕ್ಕೋನಹಳ್ಳಿ ಗೇಟಿನ ಸದ್ಗುರು ಶ್ರೀ ಸಾಯಿಮಂದಿರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಸಾನಿಧ್ಯವನ್ನು ಗುರುಮೂರ್ತಿ ಗುರೂಜಿ ಹಾಗೂ ಚಂದ್ರಶೇಖರ ಗುರೂಜಿ ಮತ್ತು ಯೋಗಿ ಶಿವಾನಂದ್ ವಹಿಸಲಿದ್ದು, ಉದ್ಘಾಟನೆಯನ್ನು ಶಾಸಕ ಸಿ. ಎನ್. ಬಾಲಕೃಷ್ಣ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನು ಪತ್ರಕರ್ತರ ಸಂಘದ ರಾಜ್ಯಧ್ಯಕ್ಷರಾದ ತಗಡೂರು ಶಿವಾನಂದ ನುಡಿಯಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ. ಎ. ಗೋಪಾಲಸ್ವಾಮಿ, ಕರ್ನಾಟಕ ವಿದ್ಯುತ್ ಕಾರ್ಖಾನೆಯ ಅಧ್ಯಕ್ಷರಾದ ಲಲಿತ್ ರಾಘವ್, ಪತ್ರಕರ್ತರ ಸಂಘದ ರಾಜ್ಯ ಸಮಿತಿಯ ಸದಸ್ಯರುಗಳಾದ ಎಚ್. ಬಿ. ಮದನ್ ಗೌಡ, ರವಿ ನಾಕಲಗೂಡು, ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ವೇಣುಕುಮಾರ್, ಪ್ರಧಾನ ಕಾರ್ಯದರ್ಶಿ ಶಶಿಧರ್ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಮತ್ತು ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪತ್ರಕರ್ತರ ಕುಟುಂಬದ ಸದಸ್ಯರಿಗೆ ಹಲವು ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತರಾದ ನಟೇಶ್, ಚಂದ್ರು, ದಯಾನಂದ್‌ರನ್ನು ವಿಶೇಷ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ. ಪತ್ರಿಕಾ ವಿತರಕರಾದ ಶರತ್ ಜಿ ಆರ್, ಮಂಜುನಾಥ್ ಎಚ್ ಡಿ ಸನ್ಮಾನಕ್ಕೆ ಭಾಜನರಾಗಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ನಟೇಶ್, ಮಾಜಿ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ನಂದನ್‌ ಪುಟ್ಟಣ್ಣ, ಮಾಜಿ ಅಧ್ಯಕ್ಷರಾದ ವೆಂಕಟಸ್ವಾಮಿ, ಖಜಾಂಚಿ ಪಾಂಡುರಂಗ ಹಾಜರಿದ್ದರು.