ಸಾರಾಂಶ
ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರಗದಗ: ಸರ್ಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಮಾಧ್ಯಮ ಹೆಚ್ಚು ಸಹಕಾರಿ ಎಂದು ಡಾ. ರಾಜೇಂದ್ರ ಬಸರಿಗಿಡದ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಆರೋಗ್ಯ ಇಲಾಖೆಯು 2023-24 ನೇ ಸಾಲಿನ ಜಿಲ್ಲಾ ಮಟ್ಟದ ಮಾಧ್ಯಮ ಮಿತ್ರರಿಗೆ ಹಮ್ಮಿಕೊಂಡ ಕಾರ್ಯಾಗಾರನ್ನು ಉದ್ಘಾಟಿಸಿ ಮಾತನಾಡಿದರು.ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕದ ಯೋಜನೆಯಲ್ಲಿ ಒಟ್ಟು 1650 ಕಾಯಿಲೆಗಳಿಗೆ ಬಿಪಿಎಲ್ ಕಾರ್ಡದಾರರಿಗೆ 5 ಲಕ್ಷ ಹಾಗೂ ಎಪಿಎಲ್ ಕಾರ್ಡದಾರರಿಗೆ 1.50 ಲಕ್ಷಗಳ ವರೆಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಅಲ್ಲದೆ, ಈ ಯೋಜನೆಯಲ್ಲಿ ಕೋವಿಡ್‌ನ್ನು ಸೇರಿಸಲಾಗಿದೆ.
ಜಿಲ್ಲೆಯಲ್ಲಿ ಅಬಾ ಆರೋಗ್ಯ ಕಾರ್ಡ್ ಯೋಜನೆಯಲ್ಲಿ ಒಟ್ಟು 86061 ಅರ್ಹ ಕಾರ್ಡದಾರರಲ್ಲಿ 72498 ಫಲಾನುಭವಿಗಳ ಚಿಕಿತ್ಸೆಗಾಗಿ 2.53 ಕೋಟಿ ವೆಚ್ಚ ಮಾಡಿದ್ದು, ಆರೋಗ್ಯ ಇಲಾಖೆಯ ಅನೇಕ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆಯಲು ಸಾರ್ವಜನಿಕರು ಮುಂದೆ ಬರಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ ಪಾಟೀಲ 2027 ರ ಒಳಗಾಗಿ ಕುಷ್ಟರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಇಲಾಖೆಯ ಸಿಬ್ಬಂದಿಗಳು ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡಲು ಶ್ರಮಿಸುತ್ತಿದ್ದಾರೆ ಎಂದರು.
ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಮಾತನಾಡಿ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಆರೋಗ್ಯ ಇಲಾಖೆಯು ಮಾಧ್ಯಮವನ್ನು ಹೆಚ್ಚು ಬಳಸಿಕೊಳ್ಳಬೇಕು.ಈ ಕಾರ್ಯಾಗಾರದಲ್ಲಿ ಪತ್ರಕರ್ತರು ಆರೋಗ್ಯ ಇಲಾಖೆಯ ಹಲವಾರು ಯೋಜನೆಗಳನ್ನು ತಿಳಿದುಕೊಂಡು ಸಾರ್ವಜನಿಕರಿಗೆ ಸೇವೆ ತಲುಪುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು.
ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಹೆಚ್ಚಿನ ಸಹಕಾರ ದೊರೆತಿದ್ದು, ಕೇಂದ್ರ ಸರಕಾರದ ಆಬಾ ಕಾರ್ಡನ ಪ್ರಯೋಜನ ಮಾಧ್ಯಮ ಪ್ರತಿನಿಧಿಗಳಿಗೆ ದೊರೆಯುವಂತಾಗಬೇಕು ಎಂದರು.ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮುಂತಾದವರು ಮಾತನಾಡಿದರು.
ಕಾರ್ಯಾಗಾರದಲ್ಲಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಪೈ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ ಸೇರಿದಂತೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅಧಿಕಾರಿಗಳು, ಪತ್ರಕರ್ತರು ಭಾಗವಹಿಸಿದ್ದರು. ಗೀತಾ ಕಾಂಬಳೆ ನಿರೂಪಿಸಿದರು. ಶಿವಕುಮಾರ ಕುಬಸದ ವಂದಿಸಿದರು.