ಸಾರಾಂಶ
ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಪತ್ರಕರ್ತರಿಗೆ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ನೀಡಲಾಯಿತು.
ಕೊಪ್ಪಳ:
2024-25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್‌ಗಳನ್ನು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಶಿವರಾಜ ತಂಗಡಗಿ ವಿತರಿಸಿದರು.ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಪತ್ರಕರ್ತರಿಗೆ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ನೀಡಲಾಯಿತು. ಈ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತಂದ ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ ಒಳಗೊಂಡ ಕಿರು ಹೊತ್ತಿಗೆಯನ್ನು ಸಚಿವರು ಬಿಡುಗಡೆಗೊಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ವಾರ್ತಾಧಿಕಾರಿ ಡಾ. ಸುರೇಶ ಜಿ. ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.