ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಒಟ್ಟು 82,546 ಪ್ರಕರಣಗಳಲ್ಲಿ 2,402 ಪ್ರಕರಣಗಳನ್ನು ಮಧ್ಯಸ್ಥಿಕೆಗಾಗಿ ಗುರುತಿಸಲಾಗಿದ್ದು, 161 ಪ್ರಕರಣಗಳನ್ನು ಕಳೆದ ಮಧ್ಯಸ್ಥಿಕೆ ಅಭಿಯಾನದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಕ್ಷ ಬಿ. ಜಯಂತ ಕುಮಾರ್ ಹೇಳಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ವಿಶೇಷ ಅಭಿಯಾನ-ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 2.0 90 ದಿನಗಳ ಡ್ರೈವ್ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣದಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜ. 2 ರಿಂದ ಏಪ್ರಿಲ್ 2ರವರೆಗೆ ಮಧ್ಯಸ್ಥಿಕೆ ಅಭಿಯಾನ 2.0ವನ್ನು 90 ದಿನಗಳ ಕಾಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಮಾತನಾಡಿ, ಈ ಅಭಿಯಾನದಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣ-ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್‌ ಅಮಾನ್ಯ, ಮೋಟಾರು ಅಪಘಾತ ನ್ಯಾಯಾಧೀಕರಣದ ಪ್ರಕರಣ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಭೂ-ಸ್ವಾಧೀನ, ವಿಭಾಗ ಪ್ರಕರಣಗಳು, ಕಾರ್ಮಿಕ ವಿವಾದಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಅಪರಾಧಿಕ ಪ್ರಕರಣಗಳು ಸೇರಿದಂತೆ ಮತ್ತಿತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.