ಸಾರಾಂಶ
ಮೂಲ್ಕಿ: ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ತಪಾಸಣೆಯ ಅಗತ್ಯವಿದ್ದು, ಈ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ. ಸಂಸ್ಥೆಯು ವ್ಯವಹಾರದ ಜೊತೆಗೆ ವೈದ್ಯಕೀಯ ಶಿಬಿರದಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಹೇಳಿದರು.ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಶಾಖೆ ಆಶ್ರಯದಲ್ಲಿ ಸಂಗಮ ಮಹಿಳಾ ಮಂಡಳಿ ಇಂದಿರಾನಗರದ ಸಹಯೋಗದಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ ದುರ್ಗಾ ಸಂಜೀವನಿ ಮಣಿಪಾಲ್ ಹಾಸ್ಪಿಟಲ್ ಕಟೀಲು ಸಹಕಾರದಲ್ಲಿ ಹಳೆಯಂಗಡಿಯ ಇಂದಿರಾನಗರದ ಇಂದಿರಾಗಾಂಧಿ ಸಭಾಭವನದಲ್ಲಿ ಆಯೋಜಿಲಾದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಇಂದಿರಾನಗರ ಸಂಗಮ ಮಹಿಳಾ ಮಂಡಳಿ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಕೃಷ್ಣ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.ಹಳೆಯಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಜಲಜಾ ಪಾಣಾರ್, ಸದಸ್ಯರಾದ ಪದ್ಮಾವತಿ ಶೆಟ್ಟಿ, ಅಬ್ದುಲ್ ಅಜೀಜ್, ಅಬ್ದುಲ್ ಖಾದರ್, ನಿರಂಜನೀತು, ಶಶಿಕಲಾ ಕರಿತೋಟ, ಸುಚಿತ್ರ ಪ್ರಸನ್ನ, ಮಹಿಳಾ ಮಂಡಳಿ ಅಧ್ಯಕ್ಷೆ ಮಾಲತಿ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮಂಡಳಿ ಸದಸ್ಯೆ ರಜಿಯಾ ಬಾನು ಸ್ವಾಗತಿಸಿದರು. ಲಾವಣ್ಯ ವಂದಿಸಿದರು. ನಿರಂಜಲ ನೀತು ನಿರೂಪಿಸಿದರು. ಬಳಿಕ ವೈದ್ಯಕೀಯ ತಪಾಸಣಾ ಶಿಬಿರ ಜರುಗಿತು.;Resize=(128,128))
;Resize=(128,128))
;Resize=(128,128))