ಸಾರಾಂಶ
ಕ್ರೀಡಾಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ . ಚರಂತಿಮಠ ಅಭಿನಂದಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬೆಂಗಳೂರಿನ ರಾಜೀವ ಗಾಂಧಿ ವಿ.ವಿ.ದಿಂದ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ, ಹಾಗೂ ಬೆಂಗಳೂರಿನ ಸೇಂಟ್ ಜಾನ್ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಪುರುಷರ ಹಾಕಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆದು ಬಾಗಲಕೋಟೆ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.ಬಾಗಲಕೋಟೆ ಮೆಡಿಕಲ್ ಕಾಲೇಜು ಮೈದಾನದಲ್ಲಿ ನಡೆದ ಪುರುಷರ ವಲಯ ಮಟ್ಟದ ಬಾಸ್ಕೆಟ್ ಬಾಲ್‌ನಲ್ಲಿ ಪ್ರಥಮ ಸ್ಥಾನ ಮತ್ತು ಕಲಬುರ್ಗಿ ಸಮತಾ ಆಯುರ್ವೇದಿಕ ಮೆಡಿಕಲ್ ಕಾಲೇಜಲ್ಲಿ ನಡೆದ ಮಹಿಳೆಯರ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಎಲ್ಲ ಕ್ರೀಡಾಕೂಟಗಳಲ್ಲಿ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ತಂಡದ ನೇತೃತ್ವವನ್ನು ದೈಹಿಕ ನಿರ್ದೇಶಕ ವಿಜಯಕುಮಾರ ಹಿರೇಮಠ ವಹಿಸಿದ್ದರು. ಕ್ರೀಡಾಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ . ಚರಂತಿಮಠ, ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಬಿ.ವಿ.ವಿ.ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಮತ್ತು ಡಾ.ಸಂತೋಷ ಶೀಲವಂತ ಅಭಿನಂದಿಸಿದ್ದಾರೆ.