ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿಧ್ಯಾರ್ಥಿಗಳಿಗಾಗಿ ೫ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ ೨೦೨೬ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆ.ಎಂ.ಸಿ. ಕಾಲೇಜು ಮಂಗಳೂರು ತಂಡವನ್ನು ಪ್ರತಿನಿಧಿಸಿದ ಡಾ. ಭಾನ್ವಿ ಅಗರ್ವಾಲ್ ಮತ್ತು ಡಾ. ಕುನಾಲ್ ಸೇತ್ ತಂಡ ಪ್ರಥಮ ಸ್ಥಾನ ಗಳಿಸಿ ಪ್ರತಿಷ್ಠಿತ ಮೆಡಿಕ್ವಿಜ್ ಪ್ರಶಸ್ತಿ ಪಡೆಯಿತು. ಅದೇ ಕಾಲೇಜನ್ನು ಪ್ರತಿನಿಧಿಸಿದ ಡಾ. ಅಭಿಷೇಕ್ ಭಟ್ ಮತ್ತು ಡಾ. ಸಾಯಿ ಕೃಷ್ಣ ತಂಡ ದ್ವಿತೀಯ ಸ್ಥಾನ, ತೃತೀಯ ಸ್ಥಾನವನ್ನು ಕಣಚೂರು ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ಡಾ. ರಾಘವೇಂದ್ರ ಮತ್ತು ಡಾ. ವಿನಾಯಕ್ ತಂಡ ಗಳಿಸಿತು.
ಕಣಚೂರು ವೈದ್ಯಕೀಯ ಕಾಲೇಜಿನ ಡೀನ್ ಡಾ. ಶಹನವಾಜ್ ಮಣಿಪಾಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರದಾನ ಮಾಡಿದರು.ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯ ಸಲಹಾ ಸಮಿತಿಯ ಸದಸ್ಯ ಡಾ. ವೆಂಕಟರಾಯ ಪ್ರಭು, ಕಣಚೂರು ವೈದ್ಯಕೀಯ ಕಾಲೇಜಿನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್ ಮತ್ತು ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಮೋನಿಸ್ ಇದ್ದರು. ವೈದ್ಯಕೀಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಡಾ. ದೇವದಾಸ್ ರೈ ನಿರೂಪಿಸಿದರು.
ಡಾ. ಅಬ್ದುಲ್ ಕರೀಮ್ ಫರೂಕಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಡಾ. ಪ್ರೀತಮ್ ಸಹಕರಿಸಿದರು. ಎಂ.ವಿ. ಮಲ್ಯ ಬಹುಮಾನ ಪ್ರಯೋಜಿಸಿದ್ದರು.