ಸಾರಾಂಶ
ಚಾಮರಾಜನಗರದ ಸಿಮ್ಸ್ ಸಭಾಂಗಣದಲ್ಲಿ ಮಾದಕ ವಸ್ತುಗಳ ವ್ಯಸನ ಅರಿವು ಕಾರ್ಯಾಗಾರವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಬಿ.ಟಿ ಕವಿತಾ ಉದ್ಘಾಟಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ವೈದ್ಯಕೀಯ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಬಿ.ಟಿ ಕವಿತಾ ಸಲಹೆ ನೀಡಿದರು.ನಗರದ ಸಿಮ್ಸ್ ಸಭಾಂಗಣದಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸ್, ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ವ್ಯದ್ಯಕೀಯ ವಿಜ್ಞಾನ ಸಂಸ್ಥೆ ಗಳ ಆಶ್ರಯದಲ್ಲಿ ನಡೆದ ಮಾದಕ ವಸ್ತುಗಳ ವ್ಯಸನ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ವೈದ್ಯರಾಗಲು ಕಷ್ಟಪಟ್ಟು ನೀಟ್ ಪರೀಕ್ಷೆ ಎದುರಿಸಿ ವ್ಯದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಇಂಂಜಿನಿಯರಿಂಗ್ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪೋಷಕರು ನಿಮ್ಮ ಮೇಲೆ ತುಂಬಾ ಆಸೆಯಿಟ್ಟುಕೊಂಡು ಓದಿಸುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಮಾದಕ ವಸ್ತುಗಳಿಂದ ದೂರವಿದ್ದು, ನೀವು ವೈದ್ಯರಾಗುವ ಪೋಷಕರ ಕನಸನ್ನು ನನಸಾಗಿಸಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದರು.ಮಾದಕವಸ್ತು ಸೇವನೆಯಿಂದ ಅನೇಕರು ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಈ ದುಶ್ಚಟದಿಂದ ಇಡೀ ಕುಟುಂಬವೇ ತೊಂದರೆ ಸಿಲುಕಬೇಕಾಗುತ್ತದೆ. ಸಿಮ್ಸ್ ನಲ್ಲಿ ಮಾದಕ ವಸ್ತುಗಳ ಚಟುವಟಿಕೆ ನಡೆಯುತ್ತಿದೆ ಎಂದು ಮಾಹಿತಿ ಬಂದಿದೆ. ಇದರ ಬಗ್ಗೆ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದರು. ಪ್ರಾಂಶುಪಾಲ ಡಾ.ಗಿರೀಶ್ ವಿ.ಪಾಟೀಲ್, ಡಿವೈಎಸ್ಪಿ ಲಕ್ಷ್ಮಯ್ಯ, ಪೊಲೀಸ್ ಇನ್ಸ್‌ಪೆಕ್ಟರ್ ಸಾಗರ್, ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ಚಿಕ್ಕರಾಜಶೆಟ್ಟಿ, ಸಿಮ್ಸ್ ಮುಖ್ಯ ಆಡಳಿತಾಧಿಕಾರಿ ನಂಜುಂಡೇಗೌಡ, ಸ್ಥಾನೀಯ ವೈದ್ಯಾಧಿಕಾರಿ ಡಾ.ಎಂ.ಮಹೇಶ್ ಹಾಗೂ ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.