ಔಷಧೀಯ ಸಸ್ಯಗಳು ಪರಿಸರ ವ್ಯವಸ್ಥೆಯ ಭಾಗ: ಟಿ.ಜಿ.ಪ್ರೇಮಕುಮಾರ್

| Published : Jul 07 2025, 11:48 PM IST / Updated: Jul 07 2025, 11:49 PM IST

ಸಾರಾಂಶ

ಲಕ್ಷ್ಮಿ ಶ್ರೀನಿವಾಸ್ ಮಾತನಾಡಿ, ಮನೆಯಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಸುವುದು ಪರಿಸರ ಸ್ನೇಹಿ ಮತ್ತು ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಕುಶಾಲನಗರ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ., ಇಕೋ ಕ್ಲಬ್ ನ ಗೋ ಗ್ರೀನ್ ಅಭಿಯಾನ ದಡಿ ಎನ್.ಎಸ್.ಎಸ್.ಎಸ್. ಹಾಗೂ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಘಟಕದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಆರ್ಯವೈಶ್ಯ ಮಹಿಳಾ ಮಂಡಳಿ ಸಹಯೋಗದೊಂದಿಗೆ ಮಂಡಳಿಯ 45 ನೇ ವಾರ್ಷಿಕೋತ್ಸವದ ಅಂಗವಾಗಿ ಶಾಲೆಯ ಆವರಣದಲ್ಲಿ ಸಸ್ಯ ಶ್ಯಾಮಲ ಔಷಧೀಯ ಸಸ್ಯ ವನದಲ್ಲಿ ವಿವಿಧ ಔಷಧಿ ಗುಣಗಳನ್ನು ಹೊಂದಿರುವ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಲಾಯಿತು.

ಔಷಧೀಯ ವನದ ಪ್ರಾಮುಖ್ಯತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಔಷಧೀಯ ಗಿಡಗಳ ಮಹತ್ವದ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ.ಪ್ರೇಮಕುಮಾರ್ , ಔಷಧೀಯ ಸಸ್ಯಗಳು ಪರಿಸರ ವ್ಯವಸ್ಥೆಯ ಭಾಗವಾಗಿದೆ ಮತ್ತು ಅವುಗಳ ಸಂರಕ್ಷಣೆಯು ಪರಿಸರ ಸಂರಕ್ಷಣೆಗೆ ಉತ್ತಮ ಕೊಡುಗೆ ನೀಡುತ್ತವೆ ಎಂದರು.

ಔಷಧೀಯ ಸಸ್ಯಗಳು ನಮ್ಮ ಆರೋಗ್ಯ ರಕ್ಷಣೆ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಔಷಧೀಯ ಗಿಡಗಳ ಪ್ರಯೋಜನಗಳ ಕುರಿತುಮಕ್ಕಳಲ್ಲಿ ಅರಿವು ಮೂಡಿಸುವ. ದಿಸೆಯಲ್ಲಿ ಈ ಔಷಧೀಯ ವನ ಸಹಕಾರಿಯಾಗಿವೆ ಎಂದರು.ಔಷಧೀಯ ವನದಲ್ಲಿ ಔಷಧೀಯ ಗಿಡ ನೆಡುವ ಮೂಲಕ ಚಾಲನೆ ನೀಡಿದ ಆರ್ಯವೈಶ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್ ಮಾತನಾಡಿ,

ಮನೆಯಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಸುವುದು ಪರಿಸರ ಸ್ನೇಹಿ ಮತ್ತು ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ .ಗಿಡಮೂಲಿಕೆಗಳು ಒತ್ತಡ, ಆತಂಕ ಮತ್ತು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡುವ ಮೂಲಕ ಆರೋಗ್ಯ ರಕ್ಷಣೆಗೆ ಸಹಾಯ ಮಾಡುತ್ತವೆ ಎಂದರು.ಔಷಧೀಯ ಸಸ್ಯಗಳ ಮಹತ್ವದ ಬಗ್ಗೆ ತಿಳಿಸಿದ ಶಾಲಾ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ , ಕೆಲವು ಔಷಧೀಯ ಸಸ್ಯಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ, ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಕೆ.ಟಿ.ಸೌಮ್ಯ,

ಮಹಿಳಾ ಮಂಡಳಿಯ ಉಪಾಧ್ಯಕ್ಷೆ ವಾಣಿ ಮಹೇಶ್, ಕಾರ್ಯದರ್ಶಿ ತ್ರಿವೇಣಿ ಪ್ರಸಾದ್ , ಸಹ ಕಾರ್ಯದರ್ಶಿ ಆರತಿ ಮಂಜುನಾಥ್, ಖಚಾಂಚಿ

ಸುಮಾ ಶ್ಯಾಮ್ , ನಿರ್ದೇಶಕರು ಮಂಡಳಿ ಸದಸ್ಯರು ಇದ್ದರು.

ನಂತರ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.