ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

| Published : Aug 08 2024, 01:39 AM IST

ಸಾರಾಂಶ

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಆ.12ರಂದು ಬೆಂಗಳೂರಿನ ಫ್ರೀರ್ಡ್ಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಾಸಕ ಕೆ. ಷಡಕ್ಷರಿಗೆ ಮನವಿ ಸಲ್ಲಿಸಿತು

ಕನ್ನಡಪ್ರಭ ವಾರ್ತೆ ತಿಪಟೂರು

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಆ.12ರಂದು ಬೆಂಗಳೂರಿನ ಫ್ರೀರ್ಡ್ಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಾಸಕ ಕೆ. ಷಡಕ್ಷರಿಗೆ ಮನವಿ ಸಲ್ಲಿಸಿತು. ಸಂಘದ ತಾಲೂಕು ಅಧ್ಯಕ್ಷ ಜಿ.ಆರ್. ಜಯರಾಂ ಮಾತನಾಡಿ, 2017 ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವವಾನ್ವಯಗೊಳಿಸಬಾರದು. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಇ. ರಮೇಶ್, ಎಚ್.ಎಸ್. ಸೋಮಶೇಖರ್, ಸುಮಾ, ಎಚ್.ಸಿ. ಓಂಕಾರ್‌ಮೂರ್ತಿ, ಎಸ್.ಎಸ್. ಮಮತಾ, ಸಾವಿತ್ರಮ್ಮ, ದಕ್ಷಿಣಾಮೂರ್ತಿ, ಅನಿತಾ, ಎಚ್.ಆರ್. ಉಮೇಶ್, ಬಸವರಾಜು, ಭಾಗವಹಿಸಿದ್ದರು.