ಈ ಸಂದರ್ಭದಲ್ಲಿ ರೂಪಾಲಿ ಎಸ್. ನಾಯ್ಕ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಾರವಾರ ಭೇಟಿಯನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಕಾರವಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಅ. 18ರಂದು ಕಾರವಾರದಲ್ಲಿ ಕಾರ್ಯಕರ್ತರ ಸಭೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರ ನೇತೃತ್ವದಲ್ಲಿ ಕಾರವಾರ ಮತ್ತು ಅಂಕೋಲಾದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ರೂಪಾಲಿ ಎಸ್. ನಾಯ್ಕ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಾರವಾರ ಭೇಟಿಯನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಸಮನ್ವಯದಿಂದ ಕೆಲಸ ಮಾಡಬೇಕು. ಕಾರ್ಯಕ್ರಮದ ಸಿದ್ಧತೆಯಿಂದ ಹಿಡಿದು ನಿರ್ವಹಣೆಯವರೆಗೆ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.ಕೇಂದ್ರ ಸಚಿವರ ಭೇಟಿಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮದ ರೂಪುರೇಷೆ, ಅಗತ್ಯ ಸಿದ್ಧತೆ, ಸಂಘಟನಾತ್ಮಕ ಜವಾಬ್ದಾರಿಗಳು ಹಾಗೂ ಕಾರ್ಯಕರ್ತರ ಪಾತ್ರದ ಕುರಿತು ಸಭೆಯಲ್ಲಿ ಚರ್ಚಿಸಿ ರೂಪಾಲಿ ನಾಯ್ಕ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಕಾರವಾರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ, ನಗರ ಮಂಡಲದ ಅಧ್ಯಕ್ಷ ನಾಗೇಶ್ ಎಂ. ಕುರ್ಡೇಕರ್, ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಗಿ, ಮಾಜಿ ನಗರಸಭಾ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ರಾಜ್ಯ ಪ್ರಕೋಷ್ಠದ ಸದಸ್ಯ ಸುನೀಲ್ ಸೋನಿ, ಪ್ರಧಾನ ಕಾರ್ಯದರ್ಶಿ ಸೂರಜ್ ದೇಸಾಯಿ, ಗ್ರಾಮೀಣ ಹಾಗೂ ನಗರ ಮಂಡಲದ ಪ್ರಮುಖರು ಉಪಸ್ಥಿತರಿದ್ದರು.ಅಂಕೋಲಾದಲ್ಲಿ ನಡೆದ ಸಭೆಯಲ್ಲಿ ಅಂಕೋಲಾ ಮಂಡಲದ ಗೋಪಾಲಕೃಷ್ಣ ವೈದ್ಯ, ಸಂಜಯ ನಾಯ್ಕ, ಒಬಿಸಿ ಮೋರ್ಚಾ ಅಧ್ಯಕ್ಷ ರಾಜೇಂದ್ರ ನಾಯ್ಕ, ಜಿಲ್ಲಾ ಸಹ ವಕ್ತಾರ ಜಗದೀಶ ಮೊಗಟಾ, ಪುರಸಭೆ ಮಾಜಿ ಅಧ್ಯಕ್ಷ ಸೂರಜ ನಾಯ್ಕ, ಪ್ರಧಾನ ಕಾರ್ಯದರ್ಶಿ ಶ್ರೀಧರ ನಾಯ್ಕ, ರಾಜ್ಯ ಪ್ರಕೋಷ್ಟದ ಸಹ ಸಂಚಾಲಕ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.