ನಾವುಂದ ಮೀನುಗಾರ ಮುಖಂಡರ ಸಭೆ: ಶಾಸಕ ಯಶ್ಪಾಲ್ ಸುವರ್ಣ ಭಾಗಿ

| Published : May 06 2024, 12:38 AM IST

ಸಾರಾಂಶ

ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕೊಡ್ಗಿ ನಾವುಂದ ಭಾಗದ ಮೀನುಗಾರ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.

ಕನ್ನಡಪ್ರಭ ವಾರ್ತೆ ಬೈಂದೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರವಾಗಿ ಚುನಾವಣಾ ಪ್ರಚಾರದ ಅಂಗವಾಗಿ ನಾವುಂದ ಭಾಗದ ಮೀನುಗಾರ ಮುಖಂಡರ ಸಭೆಯಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕೊಡ್ಗಿ ಭಾಗವಹಿಸಿ ಮತ್ತೊಮ್ಮೆ ನರೇಂದ್ರ ಮೋದಿಯನ್ನು ಪ್ರಧಾನಿಯಾಗಿಸಲು ಸಂಕಲ್ಪ ಮಾಡುವಂತೆ ಮನವಿ ಮಾಡಿ ಮತಯಾಚನೆ ಮಾಡಿದರು.

ಈ ಸಂದರ್ಭ ಮೀನುಗಾರ ಮುಖಂಡರಾದ ಆನಂದ ಖಾರ್ವಿ, ಜಗನ್ನಾಥ, ಪಕ್ಷದ ಪ್ರಮುಖರಾದ ಶಿಲ್ಪಾ ಸುವರ್ಣ, ಶ್ಯಾಮಲ ಕುಂದರ್, ಅನಿತಾ ಶ್ರೀಧರ್, ಶರತ್ ಶೆಟ್ಟಿ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಉಭಯ ಶಾಸಕರು ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಕಚೇರಿಯಲ್ಲಿ ನಾಡದೋಣಿ ಮೀನುಗಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.

ಈ ಸಂದರ್ಭ ಮೀನುಗಾರ ಮುಖಂಡರಾದ ಆನಂದ ಖಾರ್ವಿ, ಯಶವಂತ ಗಂಗೊಳ್ಳಿ, ಗಣಪತಿ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

------------

ರಾಷ್ಟ್ರೀಯ ಹೆದ್ದಾರಿ ಮರು ಡಾಂಬರೀಕರಣ ಶೀಘ್ರ ಪೂರ್ಣಗೊಳಿಸಿ: ಯಶ್ಪಾಲ್‌ ಸೂಚನೆ

ಕನ್ನಡಪ್ರಭ ವಾರ್ತೆ ಉಡುಪಿರಾಷ್ಟ್ರೀಯ ಹೆದ್ದಾರಿಯ ಉಪ್ಪೂರು ಕೆಜಿ ರೋಡ್ ಭಾಗದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಮರು ಡಾಮರೀಕರಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.

ಅವರು ಕೆಜಿ ರೋಡ್ ನಲ್ಲಿ ಮರು ಡಾಮರೀಕರಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರು ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಸಮಸ್ಯೆ ಎದುರಿಸುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಪೊಲೀಸ್ ಇಲಾಖೆಯ ಸಹಕಾರ ಪಡೆದು ತಕ್ಷಣದಿಂದಲೇ ರಾತ್ರಿ ಹಗಲು ಕೆಲಸ ನಡೆಸಿ 3 ದಿನದೊಳಗೆ ಮರುಡಾಮರೀಕರಣ ಕಾರ್ಯವನ್ನು ಪೂರ್ಣಗೊಳಿಸುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.