ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿ

| Published : Mar 02 2025, 01:19 AM IST

ಸಾರಾಂಶ

ತಾಲೂಕು ಹಂತದಲ್ಲಿ ಟಾಸ್ಕ್ ಫೋರ್ಸ್ ರಚಿಸಿಕೊಂಡು ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮೈಸೂರುಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸುಲ ಅಧಿಕಾರಿಗಳು ಸಿದ್ಧರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಕುಡಿಯುವ ನೀರಿನ ಪರಿಸ್ಥಿತಿ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಾಲೂಕು ಹಂತದಲ್ಲಿ ಟಾಸ್ಕ್ ಫೋರ್ಸ್ ರಚಿಸಿಕೊಂಡು ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಳೆದ ವರ್ಷ ಉತ್ತಮ ಮಳೆಯಾದ್ದರಿಂದ ಈ ಬೇಸಿಗೆಯಲ್ಲಿ ಕುಡಿಯುವ ನೀರು ತೊಂದರೆ ಇಲ್ಲ. ಮೇವು ಅಭಾವ ಆಗಬಾರದು. ಕುಡಿಯುವ ನೀರು ತೊಂದರೆ ಇರುವ ಗ್ರಾಮಗಳನ್ನು ಗುರುತಿಸಿ ಮುಂಜ್ರಾಗತಾ ಕ್ರಮ ಕೈಗೊಳ್ಳಬೇಕು. ಬೋರ್ ವೆಲ್ ಬತ್ತಿದ್ದರೆ ಪರ್ಯಾಯ ಮಾರ್ಗದಿಂದ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಅಭಾವವಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.ಏಭತ್ತ ಕೊಯ್ಲು ಆಗಿದೆ. ರೈತರು ಮೇವು ಸಂಗ್ರಹಣೆ ಎಲ್ಲಿ ಮಾಡಿದ್ದಾರೆ ಪರಿಶೀಲಿಸಬೇಕು. ಒಂದು ವೇಳೆ ಮೇವು ಅಭಾವ ಕಂಡು ಬಂದರೆ ಎಲ್ಲಿಂದ ಮೇವು ತರಬೇಕು ಎಂಬುದನ್ನು ಅಧಿಕಾರಿಗಳು ಪತ್ತೆಹಚ್ಚಬೇಕು. ಸದ್ಯಕ್ಕೆ ಗೋ ಶಾಲೆ ತೆರೆಯುವ ಅವಶ್ಯಕತೆ ಇಲ್ಲ ಎಂದು ಹೇಳಿದರು.ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಇಲಾಖೆಯಿಂದ ಅರಿವು ಮೂಡಿಸಬೇಕು. ಕಾಯಿಲೆಗಳು ಉಲ್ಬಣಗೊಳ್ಳದಂತೆ ಆರೋಗ್ಯ ಇಲಾಖೆಯಿಂದ ಮುಂಜಾಗ್ರತೆ ವಹಿಸಬೇಕು ಎಂದು ಅವರು ತಿಳಿಸಿದರು.-----------------eom/mys/dnm/