ಸಾರಾಂಶ
ಸರ್ಕಾರದಿಂದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ರಂತೆ ಎಲ್ಲಾ ಮೈಕ್ರೋ ಫೈನಾನ್ಸ್‌ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು
ಕನ್ನಡಪ್ರಭ ವಾರ್ತೆ ಮೈಸೂರು
ಸರ್ಕಾರದ ಕಾಯಿದೆಯನ್ವಯ ನೋಂದಣಿ ಮಾಡಿಕೊಳ್ಳದೆ ವಹಿವಾಟು ನಡೆಸುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂಮದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಎಚ್ಚರಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯಲ್ಲಿ ಇರುವ ಮೈಕ್ರೋ ಫೈನಾನ್ಸ್‌ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ರಂತೆ ಎಲ್ಲಾ ಮೈಕ್ರೋ ಫೈನಾನ್ಸ್‌ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು.ಈ ಕಾರ್ಯಕ್ಕಾಗಿ ಸಹಕಾರ ಸಂಘಗಳ ಉಪ ನಿಬಂಧಕರನ್ನು ನೋಡಲ್‌ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಅವರ ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ನೋಡಲ್ ಅಧಿಕಾರಿಗಳಿಗೆ ಸಲ್ಲಿಸಲು ಅವರು ತಿಳಿಸಿದರು. ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಹಾಗೂ ಮೈಕ್ರೋ ಫೈನಾನ್ಸ್‌ಸಂಸ್ಥೆ ಪ್ರತಿನಿಧಿಗಳು ಇದ್ದರು.