ಕನ್ನಡಪ್ರಭ ವಾರ್ತೆ ಅಥಣಿ ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆ - ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ಅ.12ರಂದು ದೆಹಲಿಯಲ್ಲಿ ನಡೆಯಲಿರುವ ಮಹತ್ವದ ಸಭೆಗೆ ಆಗಮಿಸುವಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪತ್ರ ಬರೆದು ಆಹ್ವಾನಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಸರ್ಕಾರದ ಪ್ರತಿನಿಧಿಯಾಗಿ ನನಗೆ ಭಾಗವಹಿಸುವಂತೆ ತಿಳಿಸಿದ್ದಾರೆ. ಆದ್ದರಿಂದ ಅಂದು ದೆಹಲಿಗೆ ತೆರಳಿ ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ವಿಷಯ ಮಂಡಿಸುತ್ತೇನೆ ಎಂದು ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಕನ್ನಡಪ್ರಭ ವಾರ್ತೆ ಅಥಣಿ
ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆ - ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ಅ.12ರಂದು ದೆಹಲಿಯಲ್ಲಿ ನಡೆಯಲಿರುವ ಮಹತ್ವದ ಸಭೆಗೆ ಆಗಮಿಸುವಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪತ್ರ ಬರೆದು ಆಹ್ವಾನಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಸರ್ಕಾರದ ಪ್ರತಿನಿಧಿಯಾಗಿ ನನಗೆ ಭಾಗವಹಿಸುವಂತೆ ತಿಳಿಸಿದ್ದಾರೆ. ಆದ್ದರಿಂದ ಅಂದು ದೆಹಲಿಗೆ ತೆರಳಿ ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ವಿಷಯ ಮಂಡಿಸುತ್ತೇನೆ ಎಂದು ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.ತಾಲೂಕಿನ ರಡ್ಡೇರಹಟ್ಟಿ ಮತ್ತು ಸತ್ತಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕೇಂದ್ರ ಸರ್ಕಾರ ನಿಗದಿಪಡಿಸಿದ FRP ಹೊರತಾಗಿ ಹೆಚ್ಚುವರಿ ಕಬ್ಬಿನ ಬೆಲೆಗಾಗಿ ಕರ್ನಾಟಕದ ರೈತರು ಬೇಡಿಕೆ ಮುಂದಿಡುತ್ತಿದ್ದು, ಸಕ್ಕರೆ ವಲಯದಲ್ಲಿ ಸಮತೋಲನ ಕಾಯ್ದುಕೊಳ್ಳುವ ಜತೆಗೆ ಕಬ್ಬು ಬೆಳೆಗಾರರಿಗೂ ಲಾಭದಾಯಕ ಆದಾಯಕ್ಕಾಗಿ ಸರ್ಕಾರ ಪ್ರತಿ ವರ್ಷ FRP ಹೆಚ್ಚಿಸುತ್ತಿದ್ದು, ನಮ್ಮ ರಾಜ್ಯದ ರೈತರು ಪ್ರತಿ ಟನ್ ಕಬ್ಬಿಗೆ ₹5,500 ದರ ನೀಡುವಂತೆ ಅಗ್ರಹಿಸುತ್ತಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಪರವಾಗಿ ಮತ್ತು ರಾಜ್ಯದ ಕಬ್ಬು ಬೆಳೆಗಾರರ ಪರವಾಗಿ ಕೇಂದ್ರ ಸರ್ಕಾರದ ಸಭೆಯಲ್ಲಿ ವಿಷಯ ಮಂಡಿಸುತ್ತೇನೆ.ನಾನು ಒಬ್ಬ ಸರ್ಕಾರದ ಪ್ರತಿನಿಧಿಯಾಗಿ, ಸಹಕಾರ ಸಚಿವನಾಗಿ ಭಾಗವಹಿಸುವುದಕ್ಕಿಂತ ಒಬ್ಬ ರೈತನ ಮಗನಾಗಿ ಮತ್ತು ಕಬ್ಬು ಬೆಳೆಗಾರನಾಗಿ ಭಾಗವಹಿಸುತ್ತಿದ್ದೇನೆ ಎಂಬ ಹೆಮ್ಮೆ ನನಗಿದೆ. ರಾಜ್ಯದ ರೈತರ ವಿವಿಧ ಬೇಡಿಕೆ ಮತ್ತು ಸಮಸ್ಯೆಗಳನ್ನು ನಾನು ಸಂಪೂರ್ಣ ಅರ್ಥೈಸಿಕೊಂಡಿದ್ದೇನೆ. ಅವರ ಬೇಡಿಕೆಗಳನ್ನ ಕಬ್ಬು ಬೆಳೆಗಾರರ ಸಭೆಯಲ್ಲಿ ಚರ್ಚಿಸಿ ರಾಜ್ಯದ ಕಬ್ಬು ಬೆಳೆಗಾರರಿಗೆ ಯೋಗ್ಯ ಬೆಲೆ ಕೊಡಿಸುವ ನಿಟ್ಟಿನಲ್ಲಿ ವಿಷಯ ಮಂಡನೆ ಮಾಡುತ್ತೇನೆ ಎಂದು ಹೇಳಿದರು.
-ಸಹಕಾರ ಸಚಿವ ಲಕ್ಷ್ಮಣ ಸವದಿ