ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ತ್ವರಿತ: ಡಿಸಿ ಸೂಚನೆ

| Published : Jan 24 2024, 02:02 AM IST

ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ತ್ವರಿತ: ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಇದೀಗ ಪ್ರವಾಸೋದ್ಯಮದ ಸಮಯವಾಗಿದ್ದು, ಹಲವಾರು ಪ್ರವಾಸಿಗರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅಲ್ಲದೆ ಮಾಲ್ಡೀವ್ಸ್, ಲಕ್ಷದ್ವೀಪದ ವಿಷಯವಾಗಿ ಸ್ಥಳೀಯ ಬೀಚ್‍ಗಳ ಹೆಸರು ಕೂಡ ಕೇಳಿ ಬರುತ್ತಿದ್ದು, ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳನ್ನು ಮುಗಿಸಿ ಪ್ರವಾಸಿಗರನ್ನು ಕರಾವಳಿಯತ್ತ ಸೆಳೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನಲ್ಲಿ ಪ್ರವಾಸೋದ್ಯಮದ ಬಗೆಗಿನ ಹಲವು ಯೋಜನೆಗಳು ನಿಧಾನಗತಿಯಲ್ಲಿ ನಡೆಯುತ್ತಿವೆ. ಆದಷ್ಟು ಬೇಗ ಎಲ್ಲ ರೀತಿಯ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಸೂಚಿಸಿದ್ದಾರೆ.ನಗರದ ತಮ್ಮ ಕಚೇರಿಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.ಇದೀಗ ಪ್ರವಾಸೋದ್ಯಮದ ಸಮಯವಾಗಿದ್ದು, ಹಲವಾರು ಪ್ರವಾಸಿಗರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅಲ್ಲದೆ ಮಾಲ್ಡೀವ್ಸ್, ಲಕ್ಷದ್ವೀಪದ ವಿಷಯವಾಗಿ ಸ್ಥಳೀಯ ಬೀಚ್‍ಗಳ ಹೆಸರು ಕೂಡ ಕೇಳಿ ಬರುತ್ತಿದ್ದು, ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳನ್ನು ಮುಗಿಸಿ ಪ್ರವಾಸಿಗರನ್ನು ಕರಾವಳಿಯತ್ತ ಸೆಳೆಯುವಂತಾಗಬೇಕು ಎಂದು ಹೇಳಿದರು.ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯೂ ಬ್ಲೂಫ್ಲಾಗ್ ಬೀಚ್ ಆಗಿ ರೂಪುಗೊಂಡಿದೆ. ಆದರೆ ಈ ಬೀಚ್‌ ಬಗ್ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಆದ್ದರಿಂದ ಬೀಚ್‍ನ ಮುಖ್ಯದ್ವಾರ ಹಾಗೂ ನಗರದ ಜನದಟ್ಟಣೆ ಇರುವಂತಹ ಪ್ರದೇಶಗಳಲ್ಲಿ ಅತ್ಯಾಕರ್ಷಕ ನಾಮಫಲಕ ಅಳವಡಿಸಬೇಕು. ಕರಾವಳಿಯ ಪ್ರವಾಸೋದ್ಯಮವನ್ನು ಇನ್ನಷ್ಟು ಜನರಿಗೆ ತಲುಪುವಂತೆ ಮಾಡಲು ಸಾಮಾಜಿಕ ಜಾಲತಾಣಗಳು, ವೆಬ್‍ಸೈಟ್‌ಗಳಲ್ಲಿ ಪ್ರವಾಸೋದ್ಯಮ ಸ್ಥಳಗಳ ಕುರಿತು ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಒಳಗೊಂಡಂತೆ ಸಂಪೂರ್ಣ ಚಿತ್ರಣ ನೀಡುವ ಸಲುವಾಗಿ ಪರಿಣತಿ ಹೊಂದಿರುವವರನ್ನು ಸಂಪರ್ಕಿಸಿ ಅವರಿಂದ ಆಕರ್ಷಕವಾಗಿ ವಿನ್ಯಾಸಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚಿಸಿದರು.ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಮತ್ತಿತರರು ಇದ್ದರು.