ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆಗೆ ಸಭೆ: ರೇಹಾನ್‌ ಪಾಷ

| Published : Feb 02 2024, 01:05 AM IST

ಸಾರಾಂಶ

ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಮಾಡಿದ್ದು ಅವುಗಳ ಅನುಷ್ಠಾನದ ಲೋಪದೋಷ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಸಭೆ ಏರ್ಪಡಿಸಲಾಗಿದೆ.

ಚಳ್ಳಕೆರೆ: ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಮಾಡಿದ್ದು ಅವುಗಳ ಅನುಷ್ಠಾನದ ಲೋಪದೋಷ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಸಭೆ ಏರ್ಪಡಿಸಲಾಗಿದೆ ಎಂದು ತಹಸೀಲ್ಧಾರ್ ರೇಹಾನ್‌ಪಾಷ ತಿಳಿಸಿದ್ದಾರೆ.

ಪತ್ರಕರ್ತರಿಗೆ ಮಾಹಿತಿ ನೀಡಿ, ಫೆ. ೩ರ ಶನಿವಾರ ಬೆಳಗ್ಗೆ ೧೦ಕ್ಕೆ ಪಾವಗಡ ರಸ್ತೆ ಶ್ರೀಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದ್ದು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯೋಜನೆಗಳ ಸಾಧಕಬಾಧಕಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿಯೋಜನೆ, ಯುವನಿಧಿ ಯೋಜನೆಗಳನ್ನು ಈಗಾಗಲೇ ಜಾರಿ ಮಾಡಲಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದಾರೆ. ಆದರೆ ಎಲ್ಲಾ ಯೋಜನೆಗಳು ಫಲಾನುಭವಿಗಳನ್ನು ನೇರವಾಗಿ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದು ಲೋಪವಿದ್ದಲ್ಲಿ ಸರಿಪಡಿಸುವ ನಿಟ್ಟಿನಲ್ಲಿ ಈ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಇಒ ಎಚ್.ಶಶಿಧರ, ಪೌರಾಯುಕ್ತ ಸಿ.ಚಂದ್ರಪ್ಪ, ಸಿಡಿಪಿಒ ಹರಿಪ್ರಸಾದ್, ಶಿರಸ್ತೇದಾರ್ ಸದಾಶಿವಪ್ಪ, ಗಿರೀಶ್, ಬೆಸ್ಕಾಂ ಅಧಿಕಾರಿ ರಾಜು, ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಪ್ರಭು, ಪಿಡಿಒಗಳಾದ ಗುಂಡಯ್ಯ, ಓಬಣ್ಣ, ಕಂದಾಯಾಧಿಕಾರಿ ಲಿಂಗೇಗೌಡ ಮುಂತಾದವರು ಉಪಸ್ಥಿತರಿದ್ದರು.