ಪಟ್ಟಣದಲ್ಲಿ ಶೀಘ್ರ ಮೆಗಾ ಮಾರ್ಕೆಟ್‌ ನಿರ್ಮಾಣ

| Published : Oct 17 2025, 01:04 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ಪುರಸಭೆಗೆ ಶಾಶ್ವತ ಆದಾಯ ತರುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಹೆಸರಿನಲ್ಲಿರುವ ಜಾಗವನ್ನು ಪುರಸಭೆ ಹೆಸರಿಗೆ ಹಸ್ತಾಂತರ ಮಾಡಿ 1.14 ಎಕರೆ ಜಾಗದಲ್ಲಿ ಸುಸಜ್ಜಿತ ಮೆಗಾ ಮಾರ್ಕೆಟ್‌ ನಿರ್ಮಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಪುರಸಭೆಗೆ ಶಾಶ್ವತ ಆದಾಯ ತರುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಹೆಸರಿನಲ್ಲಿರುವ ಜಾಗವನ್ನು ಪುರಸಭೆ ಹೆಸರಿಗೆ ಹಸ್ತಾಂತರ ಮಾಡಿ 1.14 ಎಕರೆ ಜಾಗದಲ್ಲಿ ಸುಸಜ್ಜಿತ ಮೆಗಾ ಮಾರ್ಕೆಟ್‌ ನಿರ್ಮಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಹಳೆ ತಹಸೀಲ್ದಾರ್ ಆವರಣದಲ್ಲಿ ಹಮ್ಮಿಕೊಂಡಿದ್ದ ಮೆಗಾ ಮಾರ್ಕೆಟ್‌ ನಿರ್ಮಾಣದ ಮೊದಲ ಹಂತದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಂದಗಿ ನಗರದಲ್ಲಿ ಮೆಗಾ ಮಾರುಕಟ್ಟೆ ನಿರ್ಮಿಸಿ ನಗರವನ್ನು ಅಭಿವೃದ್ಧಿಪಡಿಸಬೇಕೆನ್ನುವ ಮಹಾದಾಸೆ ನನ್ನದು. ಎಲ್ಲ ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯಾಪಾರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಾಗ ಸಿಎಂ ಸಿದ್ಧರಾಮಯ್ಯ, ಪೌರಾಡಳಿತ ಸಚಿವ ರಹೀಂಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರಿಗೆ ₹ 27.68 ಕೋಟಿ ಪ್ರಸ್ತಾವನೆ ಸಲ್ಲಿಸಿದ್ದು, ಮೊದಲನೆ ಹಂತದಲ್ಲಿ ₹ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಒಟ್ಟು 132 ಮಳಿಗೆಗಳ ಕಟ್ಟಡ ನಿರ್ಮಾಣವಾಗಲಿದೆ. ಮೊದನೆಯ ಹಂತದಲ್ಲಿ 30ಮಳಿಗೆಗಳು ನಿರ್ಮಾಣವಾಗಲಿದ್ದು, ಬಳಿಕ ಕಾಮಗಾರಿ ಪೂರ್ಣಗೊಳಿಸಲಾಗುವುದು. ಗ್ಯಾರಂಟಿಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲವೆಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಾರೆ. ಅಭಿವೃದ್ಧಿಗಾಗಿ, ರೈತರಿಗಾಗಿ, ರಸ್ತೆ ನಿರ್ಮಿಸುವುದಕ್ಕಾಗಿ ಬೇರೆ ಬೇರೆ ಕಾಮಗಾರಿಗಳಿಗೆ ಟೀಕೆ ಮಾಡುತ್ತಾರೆ. 1971ರಲ್ಲಿ ಪ್ರಾರಂಭವಾದ ಸಿಂದಗಿ ಪುರಸಭೆ ಕಳೆದ ತಿಂಗಳ ಹಿಂದೆ ನಗರಸಭೆಯಾಗಿ ಘೋಷಣೆಯಾಗಿದ್ದು ಸಂತಸ ತಂದಿದೆ ಎಂದರು.ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿ, ಸಿಂದಗಿ ನಗರವು ಸೌಂದರ್ಯಿಕರಣದತ್ತ ಸಾಗುತ್ತಿದೆ. ಇಂತಹ ಮಳಿಗೆಗಳಿಂದ ಪುರಸಭೆಗೆ ಹೆಚ್ಚಿನ ಆದಾಯ ಬರಲಿದೆ. ಇದರಿಂದ ಮತ್ತಷ್ಟು ಸಿಂದಗಿ ನಗರವನ್ನು ಅಭಿವೃದ್ಧಿ ಪಡಿಸಲು ಸಾಧ್ಯ. ಪುರಸಭೆ ಸಾಮಾನ್ಯ ಅನುದಾನದಲ್ಲಿ ₹ 1.20 ಕೋಟಿ 20 ಮಳಿಗೆ ಹಾಗೂ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸುವುದಾಗಿ ತಿಳಿಸಿದರು.ಈ ವೇಳೆ ಉಪಾಧ್ಯಕ್ಷ ಸಂದೀಪ ಚೌರ, ಸದಸ್ಯರಾದ ಹಣಮಂತ ಸುಣಗಾರ, ಬಾಷಾಸಾಬ ತಾಂಬೊಳ್ಳಿ, ಹಾಸಿಂಪೀರ ಆಳಂದ, ರಾಜಣ್ಣ ನಾರಾಯಣಕರ, ಬಸವರಾಜ ಯರನಾಳ, ಸಿದ್ದು ಮಲ್ಲೇದ, ಚನ್ನಪ್ಪ ಗೋಣಿ, ರಹಿಮ್ ದುದನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಪ್ರವೀಣ ಕಂಠಿಗೊಂಡ, ಸಾಯಬಣ್ಣ ಪುರದಾಳ, ಮಹಾನಂದ ಬಮ್ಮಣ್ಣಿ, ಚಂದ್ರಶೇಖರ ದೇವರೆಡ್ಡಿ, ಶಾಂತೂ ರಾಣಾಗೋಳ, ಜಯಶ್ರೀ ಹದನೂರ, ಶರಣಪ್ಪ ವಾರದ, ಬಾಬು ಕಮತಗಿ ಸೇರಿ ಇತರರು ಇದ್ದರು.