ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ

| Published : Jun 08 2024, 12:32 AM IST

ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ
Share this Article
  • FB
  • TW
  • Linkdin
  • Email

ಸಾರಾಂಶ

ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕಾರ್ಯಕ್ರಮ ಜರುಗಲಿದ್ದು, ಪುಸ್ತಕ ಮಳಿಗೆಯನ್ನು ರಮೇಶ ಆಲಗುಂಡಿ ಉದ್ಘಾಟಿಸುವರು. ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಬವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಸಮ್ಮೇಳನ ಉದ್ಘಾಟಿಸುವರು. ಹಿರಿಯ ಸಾಹಿತಿ ಡಾ.ವಿಜಯಕುಮಾರ ಕಟಗಿಹಳ್ಳಿಮಠ ಸಮ್ಮೇಳನಾಧ್ಯಕ್ಷರಾಗಿದ್ದಾರೆ. ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಅಧ್ಯಕ್ಷತೆ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವರು ಎಂದರು.

ಕೃತಿ ಕುರಿತು ಡಾ.ಶಾಂತರಾಜು, ಪ್ರೊ.ಚಂದ್ರಶೇಖರ ನಾಡೂರ ಮಾತನಾಡಲಿದ್ದಾರೆ. ವ್ಯಕ್ತಿ ಚಿತ್ರ ಸಂಪದ, ಅಂತರ್ಶೋಧ ಕೃತಿ ಬಿಡುಗಡೆಯಾಗಲಿದೆ. ಸಮ್ಮೇಳನಾಧ್ಯಕ್ಷರ ಬದುಕು-ಬರಹ, ಬಾಗಲಕೋಟೆ ಜಿಲ್ಲೆಯ ಸಾಹಿತ್ಯ ಪರಂಪರೆ ವಿಷಯ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, ಸಾಹಿತಿ ಡಾ.ಶಿವಾನಂದ ಕುಬಸದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಎಸ್.ಡಿ. ಕೆಮಗಲಗುತ್ತಿ, ಲಕ್ಷ್ಮಣ ಬದಾಮಿ, ಡಾ. ಸುಮಂಗಲಾ ಮೇಟಿ ಮಾತನಾಡುವರು. ಮುಖ್ಯ ಅತಿಥಿಗಳಾಗಿ ಕಾನಿಪ ಜಿಲ್ಲಾಧ್ಯಕ್ಷ ಆನಂದ ಧಲಬಂಜನ, ಕಸಾಪ ತಾಲೂಕಾಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ ನಿಡೋಣಿ, ಕನ್ನಡ ಉಪನ್ಯಾಸಕರಾದ ಡಾ.ಸಂತೋಷ ಕಾಳನ್ನವರ ಆಗಮಿಸಲಿದ್ದಾರೆ.

ಕವಿಗೋಷ್ಠಿ : ಸಾಹಿತಿ ಸುರೇಶ ಕೋರಕೊಪ್ಪ ಅಧ್ಯಕ್ಷತೆ ವಹಿಸಲಿದ್ದು, ಡಾ.ಪ್ರಕಾಶ ನರಗುಂದ ಆಶಯ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆನಂದ ಪೂಜಾರಿ, ಡಾ.ಉಮೇಶ ತಿಮ್ಮಾಪೂರ, ಮುತ್ತು ಬುಳ್ಳಾ ಆಗಮಿಸುವರು. ನಂತರ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದೆ.

ಪ್ರಶಸ್ತಿ ಪ್ರದಾನ ಮತ್ತು ಸಮಾರೋಪ ಸಮಾರಂಭದಲ್ಲಿ ಸಾಹಿತಿ ಡಾ.ಕೆ.ಕೆಂಪೇಗೌಡ ಸಮಾರೋಪ ನುಡಿಗಳನ್ನಾಡುವರು. ಹಿರಿಯ ವಿದ್ವಾಂಸ ಡಾ. ಗುರುಪಾದ ಮರಿಗುದ್ದಿ ಅಧ್ಯಕ್ಷತೆ ವಹಿಸುವರು. ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ವಚನ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶ್ರೀಶೈಲ ಕರಿಶಂಕರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಡಿ.ಎಂ. ಸಾಹುಕಾರ, ಪ್ರಾಚಾರ್ಯ ಎಸ್.ಆರ್. ಮೂಗನೂರಮಠ, ಡಾ.ಸಿದ್ದಣ್ಣ ಬಾಡಗಿ, ಪ್ರಕಾಶ ವಸ್ತ್ರದ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಮೇಘಮೈತ್ರಿ ಆದರ್ಶ ದಂಪತಿ ಪ್ರಶಸ್ತಿ ಹಾಗೂ ಮೇಘಮೈತ್ರಿ ಪ್ರಶಸ್ತಿ ಸಮಾರಂಭ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಸುನೀಲ ಮೇದಾರ, ಲಕ್ಷ್ಮೀ ಗೌಡರ, ಡಿ.ಎಸ್.ಗೌಡರ ಇದ್ದರು.