ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಬೆಂದೂರುವೆಲ್ ಶಾಖೆಯಲ್ಲಿ ನಡೆಯಿತು.ಸಂಘದ ಸದಸ್ಯರಾದ ಕೃತೀಶ್ ಕುಮಾರ್, ಪುಷ್ಪಲತಾ ಕೆ., ಮಾದವ ಕೋಟ್ಯಾನ್, ಗೋಪಾಲ್ ಸುವರ್ಣ, ಕರುಣಾನಂದ ರಾವ್ ಹಾಗೂ ಅನಂತರಾಮ್ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಂಘದ ಸದಸ್ಯ ಕೃತೀಶ್ ಕುಮಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ನೇತೃತ್ವದಲ್ಲಿ ಸಂಘದ ಸದಸ್ಯರಿಗೆ ಉತ್ತಮ ಸೇವೆ ನಿಡುತ್ತಿದೆ. ಬೆಂದೂರ್‌ವೆಲ್ ಶಾಖೆಯಲ್ಲಿ ಗ್ರಾಹಕರ ಸಂಖ್ಯೆ ಜಾಸ್ತಿ ಇದ್ದು ಇಲ್ಲಿ ಸ್ಥಳದ ಕೊರತೆ ಇರುವುದರಿಂದ ಶಾಖೆಯನ್ನು ವಿಸ್ತರಿಸಿದರೆ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು. ಸದಸ್ಯ ಮಾಧವ ಕೋಟ್ಯಾನ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅತೀ ಕಡಿಮೆ ಅವಧಿಯಲ್ಲಿ ೩೩ ಶಾಖೆ ತೆರೆದಿರುವುದು ಅಭಿನಂದನಾರ್ಹವಾಗಿದೆ. ಇದಕ್ಕಾಗಿ ಶ್ರಮಿಸಿದ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಯನ್ನು ತಿಳಿಸಿದರು.ಸದಸ್ಯ ಶಂಕರ ಶೆಟ್ಟಿ ಮಾತನಾಡಿ, ಬೆಂದೂರ್‌ವೆಲ್ ಶಾಖೆಯು ಆರಂಭದಿಂದಲು ಉತ್ತಮ ವ್ಯವಹಾರ ನಡೆಸುತ್ತಿದೆ. ಹಿರಿಯ ಸದಸ್ಯರಿಗೆ ಮನೆಗೆ ಬಂದು ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ನಮ್ಮಂತ ಹಿರಿಯ ನಾಗರಿಕರಿಗೆ ಇದರಿಂದ ತುಂಬಾ ಪ್ರಯೋಜನವಾಗುತ್ತಿದೆ ಎಂದು ತಿಳಿಸಿದರು.ವಾಮನ್ ಮೈಂದಾನ್ ಹಾಗೂ ಲಿಯೋ ಆಂಬ್ರೋಝ್ ರವರು ಸಂಘದ ಬೆಳವಣಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

8 ರಂದು ಉಚಿತ ಆರೋಗ್ಯ ಶಿಬಿರ: ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಗ್ರಾಹಕರ ಪ್ರೋತ್ಸಾಹದಿಂದ ಸಂಘ ಇಂದು ೩೩ ಶಾಖೆಯನ್ನು ಹೊಂದಲು ಕಾರಣೀಭೂತವಾಗಿದೆ. ಸಂಘದ ಪಾಲುಬಂಡವಾಳ ೨೨.೫ ಲಕ್ಷ ರು.ನಿಂದ ಪ್ರಾರಂಭವಾಗಿ ಇಂದು ೩೦೦ ಕೋಟಿ ರು. ಠೇವಣಿಯಾಗಲು ಗ್ರಾಹಕರ ಸಹಕಾರದಿಂದ ಸಾಧ್ಯವಾಗಿದೆ ಎಂದು ಪ್ರಶಂಸಿದರು.

ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿದೆ. ಸಂಘದ ಗ್ರಾಹಕರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರವನ್ನು ನಮ್ಮ ಸಂಘ ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ ಎಂದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ. ನಿರ್ದೇಶಕರಾದ ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ , ಬಿ. ಪಿ. ದಿವಾಕರ , ಗೋಪಾಲ್ ಎಂ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇದ್ದರು.ಸಂಘದ ಬೆಂದೂರುವೆಲ್ ಶಾಖೆಯ ಸಿಬ್ಬಂದಿ ನಿಶ್ಚಿತ ಸಾಲಿಯಾನ್ ಸ್ವಾಗತಿಸಿದರು. ಶಾಖಾ ಸಿಬ್ಬಂದಿ ಪವಿತ್ರ ವಂದಿಸಿದರು. ಹಿರಿಯ ಶಾಖಾಧಿಕಾರಿ ಸೌಮ್ಯಲತಾ ನಿರೂಪಿಸಿದರು.