ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಗ್ರಾಮದೇವತೆ ಶ್ರೀ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿದರು. ಬಿಜೆಪಿ ಮುಖಂಡ ಪಿ.ಟಿ. ಕೇಶವೇಗೌಡ ಮಾತನಾಡಿ, ಉತ್ತಮ ಆಡಳಿತ ನೀಡುತ್ತಿರುವ ಪ್ರಧಾನಿ ಮೋದಿ ಅವರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.
ಕನ್ನಡಪ್ರಭ ವಾರ್ತೆ ಅರಕಲಗೂಡು
ಪಟ್ಟಣದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಗ್ರಾಮದೇವತೆ ಶ್ರೀ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿದರು. ಬಿಜೆಪಿ ಮುಖಂಡ ಪಿ.ಟಿ. ಕೇಶವೇಗೌಡ ಮಾತನಾಡಿ, ಉತ್ತಮ ಆಡಳಿತ ನೀಡುತ್ತಿರುವ ಪ್ರಧಾನಿ ಮೋದಿ ಅವರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.
ಪಪಂ ಸದಸ್ಯರಾದ ರಶ್ಮಿ, ರಮೇಶ್ ವಾಟಾಳ್, ಮಾಜಿ ಅಧ್ಯಕ್ಷ ಲೋಕೇಶ್, ಮುಖಂಡರಾದ ಖಂಡೇಶ್ವರ್ ಕುಮಾರ್, ಹೊಂಡರವಳ್ಳಿ ಲೋಕೇಶ್ ಇತರರು ಇದ್ದರು.