ಅಲ್ಪಸಂಖ್ಯಾತರ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಸ್ಲಂ ಸಮಿತಿ, ಮುಸ್ಲಿಂ ಸಮಾಜದ ವೇದಿಕೆ, ಜಿಲ್ಲಾ ಯುವ ಅಲ್ಪಸಂಖ್ಯಾತರ ಸೇವಾ ಸಂಘ ಹಾಗೂ ಅಲ್ಪಸಂಖ್ಯಾತರ ಹೋರಾಟ ಸಮಿತಿಯಿಂದ ನಗರದ ಮೌಲಾನಾ ಆಜಾದ ಭವನದ ಮುಂದೆ ಪ್ರತಿಭಟನೆ ನಡೆಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಗದಗ

ಅಲ್ಪಸಂಖ್ಯಾತರ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಸ್ಲಂ ಸಮಿತಿ, ಮುಸ್ಲಿಂ ಸಮಾಜದ ವೇದಿಕೆ, ಜಿಲ್ಲಾ ಯುವ ಅಲ್ಪಸಂಖ್ಯಾತರ ಸೇವಾ ಸಂಘ ಹಾಗೂ ಅಲ್ಪಸಂಖ್ಯಾತರ ಹೋರಾಟ ಸಮಿತಿಯಿಂದ ನಗರದ ಮೌಲಾನಾ ಆಜಾದ ಭವನದ ಮುಂದೆ ಪ್ರತಿಭಟನೆ ನಡೆಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್. ಮಾನ್ವಿ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮಲ್ಲಸಮುದ್ರದ ಮೊರಾರ್ಜಿ ವಸತಿ ಶಾಲೆ ಹಾಗೂ ಎಪಿಜೆ ಅಬ್ದುಲಕಲಾಂ ಕಾಲೇಜುಗಳು ಅವ್ಯವಸ್ಥೆಯ ತಾಣವಾಗಿವೆ. ವಸತಿ ಶಾಲೆ ಹಾಗೂ ಎಪಿಜೆ ಅಬ್ದುಲಕಲಾಂ ಕಾಲೇಜಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಲಕ್ಷಾಂತರ ಅನುದಾನವನ್ನು ದುರ್ಬಳಕ್ಕೆ ಮಾಡಲಾಗುತ್ತದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೂರು ಶಿಕ್ಷಣ ಕೇಂದ್ರಗಳಿಗೆ ಒಬ್ಬರನ್ನೇ ಪ್ರಾಚಾರ್ಯರಾಗಿ ನೇಮಕ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ವಸತಿ ಶಾಲೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಅನೇಕ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ವಸತಿ ಶಾಲೆಯನ್ನು ತೂರೆಯುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ನೇರವಾಗಿ ವಸತಿ ಶಾಲೆಯ ಪ್ರಾಚಾರ್ಯರ ದುರಾಡಳಿವೇ ಕಾರಣವಾಗಿದೆ. 12 ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವಸತಿ ಶಾಲೆಯ ಪ್ರಾಚಾರ್ಯರನ್ನು ಕೊಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಸ್ಲಿಂ ಸಮಾಜದ ವೇದಿಕೆ ಅಧ್ಯಕ್ಷ ಮಹ್ಮದಯುಸುಫ ನಮಾಜಿ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾಗುತ್ತಿರುವ ವಿವಿಧ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದರೆ ಸಾರ್ವಜನಿಕರು ಮಧ್ಯವರ್ತಿಗಳ ಮೂಲಕ ಪಡೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ನಿಗಮದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಮಧ್ಯವರ್ತಿಗಳ ಹಾವಳಿಗೆ ಅಧಿಕಾರಿಗಳು ಕಡಿವಾಣ ಹಾಕಬೇಕು ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಬಾಬಾಜಾನ ಬಳಗಾನೂರ, ಮುನ್ನಾ ಶೇಖ, ಸಾಧಿಕ ನರೇಗಲ್ಲ, ಜೂನಸಾಬ ಉಮಚಗಿ, ಎಂ.ಬಿ. ನದಾಫ, ದಾದಾಪೀರ ಕಲೆಗಾರ, ಮುಜಫರ ಮುಲ್ಲಾ, ರಾಜೇಸಾಬ ಕಲ್ಮನಿ, ಅಶೋಕ ಕುಸಬಿ, ಪರವೀನಬಾನು ಹವಾಲ್ದಾರ, ಪುಷ್ಪಾ ಬಿಜಾಪೂರ, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೌಲಾಸಾಬ ಗಚ್ಚಿ, ಮಕ್ತುಮಸಾಬ ಮುಲ್ಲಾನವರ, ಮೆಹಬೂಬಸಾಬ ಬಳ್ಳಾರಿ, ಸಲೀಂ ಹರಿಹರ, ಸಕ್ರುಬಾಯಿ ಗೋಸಾವಿ, ಮಲೀಕ ಶೇಖ, ಖಾಜಾಸಾಬ ಇಸ್ಮಾಯಿಲನವರ ಸೇರಿ ಇತರರು ಇದ್ದರು.