ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ

ಕುರುಗೋಡು:ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.

ಇಲ್ಲಿನ ಬಾದನಹಟ್ಟಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಪ್ರಜಾಪ್ರಭುತ್ವದ ಎಲ್ಲ ಮಜಲುಗಳ ಕುರಿತು ತಿಳಿದುಕೊಳ್ಳುವ ಅಗತ್ಯವಿದೆ ಎಂದರು.

ಉಪನ್ಯಾಸಕ ಎನ್. ಮಧುಸೂಧನ ಮಾತನಾಡಿ, ವಿವಿಧತೆಯಲ್ಲಿ ಏಕತೆ ಮಂತ್ರ ಸಾರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಧರ್ಮದ ಹೆಸರಿನಲ್ಲಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಜಾರಿಗೆ ತರುವ ಯೋಜನೆ ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳಬೇಕಾದರೆ ಸಾರ್ವಜನಿಕರ ಭಾಗವಹಿಸುವಿಕೆ ಹೆಚ್ಚು ಮಹತ್ವ ಪಡೆದುಕೊಳ್ಳುತ್ತದೆ. ಉತ್ಸಾಹ ತೋರದಿದ್ದರೆ ಯೋಜನೆಗಳು ಫಲಪ್ರದವಾಗುವುದಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶಾಂತಲಾ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವಿ.ಎಸ್. ಶಿವಶಂಕರ್ ಮಾತನಾಡಿದರು.

ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ, ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಉಪ ಖಜಾನಾಧಿಕಾರಿ ಅಲ್ಲಾಭಕ್ಷಿ, ಬಿಇಒ ಟಿ.ಎಂ. ಸಿದ್ಧಿಲಿಂಗಮೂರ್ತಿ, ಉಪನ್ಯಾಸಕ ತಿಪ್ಪೇರುದ್ರ ಸಂಡೂರು ಮತ್ತು ಖಜಾನಾಧಿಕಾರಿ ಅಲ್ಲಾಭಕ್ಷಿ, ತಹಸೀಲ್ದಾರ್‌ ಕಚೇರಿಯ ಶಿರಸ್ತೆದಾರ್ ವಿಜಯಕುಮಾರ್, ಆರ್‌ಐ. ಮಲ್ಲಿಕಾರ್ಜುನ, ಕೋಳೂರು, ಭದ್ರಯ್ಯಸ್ವಾಮಿ ಬಸವರಾಜ, ಕಾಲೇಜು ವಿದ್ಯಾರ್ಥಿಗಳು ಇದ್ದರು.