ಕನ್ನಡಪ್ರಭ ವಾರ್ತೆ ವಿಜಯಪುರ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಕೆ ಸೋರಿಕೆ ಮತ್ತು ದೇಶದ ಇನ್ನಿತರ ಪರೀಕ್ಷೆಗಳ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ ಬಣ) ವತಿಯಿಂದ ಜಿಲ್ಲಾಧಿಕಾರಿ ಡಾ.ಆನಂದ.ಕೆ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ, ರಮೇಶ ದರಣಾಕರ, ಮಹಾಂತೇಶ ಸಾಸಬಾಳ, ವಿಶ್ವನಾಥ ದೊಡಮನಿ ಇತರರು ಇದ್ದರು.