ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣ

| Published : Sep 13 2024, 01:35 AM IST

ಸಾರಾಂಶ

ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್ ಹೇಳಿದರು. ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬೆಳಗಟ್ಟ ವತಿಯಿಂದ ಮಾರುತಿ ಅನುದಾನಿತ ಪ್ರೌಢಶಾಲೆ ಸಭಾ ಭವನದಲ್ಲಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್ ಹೇಳಿದರು. ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬೆಳಗಟ್ಟ ವತಿಯಿಂದ ಮಾರುತಿ ಅನುದಾನಿತ ಪ್ರೌಢಶಾಲೆ ಸಭಾ ಭವನದಲ್ಲಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಪ್ರಪಂಚದಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹೆಚ್ಚುತ್ತಿವೆ. ಆಧುನಿಕ ಜೀವನ ಒತ್ತಡ, ಆತ್ಮಸ್ಥೈರ್ಯದ ಕೊರತೆಯಿಂದ ಸಮಾಜದಲ್ಲಿ ಆತ್ಮಹತ್ಯೆಗಳು ಕಾಡುತ್ತಿವೆ. ಇದನ್ನು ತೊಡೆದು ಹಾಕಲು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ ಎಂದರು.

ಸಮುದಾಯ ಆರೋಗ್ಯ ಶುಶ್ರೂಷಕ ಅಧಿಕಾರಿ ರೂಪ ಮಾತನಾಡಿ, ವಿಶ್ವ ಆತ್ಮಹತ್ಯೆ ತಡೆ ದಿನವನ್ನು (WSPD) 2003 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ (WHO)ಇಂಟರ್ನ್ಯಾಷನಲ್ ಅಸೋಸಿಯೇಷನ್ ಫಾರ್ ಸೂಸೈಡ್ ಪ್ರಿವೆನ್ಷನ್ ಪ್ರಾರಂಭಿಸಿತು. ಆತ್ಮಹತ್ಯೆ ಮೇಲಿನ ನಿರೂಪಣೆಯನ್ನು ಬದಲಾಯಿಸುವುದು - ಸಂಭಾಷಣೆಯನ್ನು ಪ್ರಾರಂಭಿಸುವುದು ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ ಎಂದು ತಿಳಿಸಿದರು.

ಬೆಳಗಟ್ಟ ಅರೋಗ್ಯ ನೀರಿಕ್ಷಣಾಧಿಕಾರಿ ನಾಗೇಶ, ಸಮುದಾಯ ಅರೋಗ್ಯ ಶುಶ್ರೂಷಕ ಅಧಿಕಾರಿ ರೂಪ, ಮಾರುತಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಂಜುನಾಥ, ಸಹ ಶಿಕ್ಷಕ ಶ್ರೀನಿವಾಸ್ ರೆಡ್ಡಿ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಶುಭಶ್ರೀ, ಅಶಾ ಸುಗಮಕಾರ ಮಹಾದೇವಿ ಇದ್ದರು.